ನವದೆಹಲಿ: ಪ್ರತಿಯೊಬ್ಬ ಭಾರತೀಯನು ಸಮಾನ ಪ್ರಜೆ. ಪ್ರತಿ ಪ್ರಜೆಗೆ ಈ ಭೂಮಿಯಲ್ಲಿ ಸಮಾನ ಅವಕಾಶ, ಹಕ್ಕುಗಳು ಮತ್ತು ಕರ್ತವ್ಯಗಳಿವೆ. ಭಾರತೀಯ ಪ್ರಜೆಗಳಾಗಿ ಅವರ ಗುರುತುಗಳು ಜಾತಿ, ಧರ್ಮ ಮತ್ತು ಭಾಷೆಯ ಎಲ್ಲಾ ಗುರುತುಗಳನ್ನು ಮೀರಿಸುತ್ತವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಹೇಳಿದ್ದಾರೆ.
ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ (Independence Day) ಹಿನ್ನೆಲೆ ದೇಶದ ಜನರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ ಅವರು, ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು. ಗಾಂಧಿ ಜೊತೆ ಮಹಿಳೆಯರು ಹೆಜ್ಜೆ ಹಾಕಿದ್ದಾರೆ. ಇಂದು ಕೂಡಾ ಮಹಿಳೆಯರು ಪ್ರಮುಖ ಘಟ್ಟದಲ್ಲಿದ್ದಾರೆ. ಮಹಿಳಾ ಸಶಕ್ತಿಕರಣ ಅಗತ್ಯವಾಗಿದೆ ಎಂದರು. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ವಾರಣಾಸಿಯಲ್ಲಿ ಸ್ಪರ್ಧಿಸಿದರೆ ಪ್ರಧಾನಿ ಮೋದಿ ಸೋಲ್ತಾರೆ: ಸಂಜಯ್ ರಾವತ್
Advertisement
ಭಾರತ (India) ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ ದೇಶವಾಗಿದ್ದು, ಇಲ್ಲಿ ಹಲವು ಜಾತಿ, ಭಾಷೆ, ಪ್ರಾಂತ್ಯದ ಜನರು ಒಂದಾಗಿ ಬದುಕುತ್ತಿದ್ದೇವೆ. ಭಾರತೀಯ ನಾಗರಿಕರು ಎಂದು ಹೆಮ್ಮೆಯಿಂದ ಬದುಕುತ್ತಿದ್ದೇವೆ. ಸತ್ಯ, ಅಹಿಂಸೆ ಮೂಲಕ ಸ್ವಾತಂತ್ರ್ಯ ಪಡೆಯಲಾಯಿತು. ಮಹಾತ್ಮ ಗಾಂಧಿ (Mahatma Gandhi) ದೇಶದ ಜನರಲ್ಲಿ ಸ್ವಾತಂತ್ರ್ಯವನ್ನು ಜಾಗೃತಗೊಳಿಸಿದರು ಎಂದು ಹೇಳಿದರು. ಇದನ್ನೂ ಓದಿ: 10,000 ಪೊಲೀಸರು.. ಆ್ಯಂಟಿ ಡ್ರೋನ್ ಸಿಸ್ಟಮ್, ಅತ್ಯಾಧುನಿಕ ಕ್ಯಾಮೆರಾ – ಸ್ವಾತಂತ್ರ್ಯೋತ್ಸವಕ್ಕೆ ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ
Advertisement
Advertisement
ಭಾರತ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಪ್ರಭಾವ ಹೆಚ್ಚಿಸಿಕೊಂಡಿದೆ. ಜಿ20 ಸಭೆಯ ಅಧ್ಯಕ್ಷ ಸ್ಥಾನವನ್ನು ಭಾರತ ನಿಭಾಯಿಸುತ್ತಿದೆ. ಈ ಸಭೆ ಭಾರತದ ಪ್ರಗತಿಗೆ ಮತ್ತೊಂದು ರಸ್ತೆಯಾಗಿದೆ. ಭಾರತ ರಾಜತಾಂತ್ರಿಕತೆಯನ್ನು ನೆಲದೊಂದಿಗೆ ಜೊಡಿಸುವ ಪ್ರಯತ್ನ ಮಾಡಿದೆ. ಸಾಮಾನ್ಯ ಜನರನ್ನು ಸಭೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡ ಹಿಜ್ಬುಲ್ ಭಯೋತ್ಪಾದಕನ ಸಹೋದರ
Advertisement
ಆರ್ಥಿಕ ಸಂಕಷ್ಟದಿಂದ ಬಹಳಷ್ಟು ರಾಷ್ಟ್ರಗಳು ಪರದಾಡುತ್ತಿದೆ. ಭಾರತ ಸರ್ಕಾರ ಈ ಎಲ್ಲಾ ಸಮಸ್ಯೆಗಳನ್ನು ಸರಿಯಾಗಿ ನಿಭಾಯಿಸುತ್ತಿದೆ. ಜಿಡಿಪಿ ಹೆಚ್ಚುತ್ತಿದೆ. ಮುದ್ರಾ ಯೋಜನೆ ಮೂಲಕ ಜನರಿಗೆ ಸರ್ಕಾರ ನೆರವಾಗುತ್ತಿದೆ. ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿದೆ. ಮೂರನೇ ಸ್ಥಾನ ತಲುಪುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರದಲ್ಲಿ ಪ್ರಗತಿ, ಉದ್ಯೋಗ ಸೃಷ್ಟಿ ಮೂಲಕ ಆರ್ಥಿಕತೆ ಹೆಚ್ಚಿಸುವ ಕೆಲಸ ಆಗುತ್ತಿದೆ. ಬಡತನದ ಮಟ್ಟವನ್ನು ಕಡಿಮೆ ಮಾಡಲಾಗುತ್ತಿದೆ. ಆದಿವಾಸಿಗಳ ಅಭಿವೃದ್ಧಿಗೂ ಸರ್ಕಾರ ಕೆಲಸ ಮಾಡುತ್ತಿದೆ. ಆದಿವಾಸಿ ಜನರು ತಮ್ಮ ಸಂಸ್ಕೃತಿ ಜೊತೆಗೆ ಆಧುನಿಕತೆಯನ್ನು ಒಳಗೂಡಿಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ‘ತಿರಂಗಾ ಯಾತ್ರೆಗೆ’ ಚಾಲನೆ ನೀಡಿದ ಅಮಿತ್ ಶಾ
ಭಾರತ ಚಂದ್ರಯಾನ 3 ಅನ್ನು ಆರಂಭಿಸಿದೆ. ಕೆಲವೇ ದಿನಗಳಲ್ಲಿ ಚಂದ್ರನ ಮೇಲೆ ಇದು ಇಳಿಯಲಿದೆ. ಈ ಕ್ಷಣವನ್ನು ನೋಡಲು ನಾನು ಕಾಯುತ್ತಿದ್ದೇನೆ. ಜಾಗತಿಕ ತಾಪಮಾನ ನಿಯಂತ್ರಣದ ಕುರಿತಾಗಿಯೂ ಭಾರತ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಪ್ರೊಫೈಲ್ ಫೋಟೋದಲ್ಲಿ ತಿರಂಗಾ ರಾರಾಜಿಸಲಿ – ಭಾರತೀಯರಿಗೆ ಪ್ರಧಾನಿ ಮೋದಿ ಕರೆ
Web Stories