– ಇದೇ ನನ್ನ ಮಾತಿನ ಸತ್ವ, ವಿವಾದ ಮಾಡೋದು ಬಿಜೆಪಿ ತತ್ವ ಎಂದ ಡಿಸಿಎಂ
ಬೆಂಗಳೂರು: ಚಾಮುಂಡೇಶ್ವರಿ (Chamundeshwari) ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ (Dasara) ಧಾರ್ಮಿಕ ಆಚರಣೆ ಅಲ್ಲ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ನಮ್ಮ ನಾಡ ದೇವತೆ ಚಾಮುಂಡೇಶ್ವರಿ. ಚಾಮುಂಡಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ ಎಂದಿದ್ದಾರೆ.ಇದನ್ನೂ ಓದಿ: ಗಣೇಶ ವಿಸರ್ಜನೆಗೆ ಬಿಬಿಎಂಪಿಯಿಂದ 41 ಕೆರೆ, 489 ತಾತ್ಕಾಲಿಕ ಸಂಚಾರಿ ಕಲ್ಯಾಣಿ ವ್ಯವಸ್ಥೆ
ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವವಳು ನಮ್ಮ ದುರ್ಗಾ ದೇವಿ. ನಾಡಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ನಮ್ಮ ನಾಡ ಹಬ್ಬ – ದಸರಾ
ನಮ್ಮ ನಾಡ ದೇವತೆ – ಚಾಮುಂಡೇಶ್ವರಿ
ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ… pic.twitter.com/AiG8RrMrVZ
— DK Shivakumar (@DKShivakumar) August 27, 2025
ಮಂಗಳವಾರ (ಆ.26) ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತವಾದ ವಿಚಾರದ ಬಗ್ಗೆ ಮಾತನಾಡಿದ್ದ ಅವರು, ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಎಲ್ಲಾ ಧರ್ಮದವರಿಗೂ ಇದೆ. ಚಾಮುಂಡೇಶ್ವರಿ ಹಿಂದೂಗಳ ಆಸ್ತಿಯಲ್ಲ. ಎಲ್ಲಾ ಸಮುದಾಯದವರು ಚಾಮುಂಡೇಶ್ವರಿಗೆ ಹೋಗ್ತಾರೆ. ಅದು ಅವರ ನಂಬಿಕೆ. ನಾವು ಮಸೀದಿ, ಚರ್ಚೆಗೆ ಹೋಗ್ತೀವಿ, ಬಸ್ತಿ, ಜೈನ್ ಟೆಂಪಲ್, ಗುರುದ್ವಾರಗೆ ಹೋಗ್ತೀವಿ. ಗುರುದ್ವಾರಕ್ಕೆ ಹೋಗೋದು ತಪ್ಪಿಸೋಕೆ ಅಗುತ್ತಾ? ಹಿಂದೂ ಟೆಂಪಲ್‌ಗೆ ಅವರನ್ನ ಬರೋದು ತಪ್ಪಿಸೋಕೆ ಆಗುತ್ತಾ? ಯಾರ್ ಬೇಕಾದ್ರು ಹೋಗಬಹುದು ಎಂದಿದ್ದರು.ಇದನ್ನೂ ಓದಿ: ಐಪಿಎಲ್‌ಗೆ ಗುಡ್‌ಬೈ ಹೇಳಿದ ಅಶ್ವಿನ್