ನವದೆಹಲಿ: ಧಾರ್ಮಿಕ ಕಟ್ಟಡಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ಎಲ್ಲಾ ಸಮುದಾಯಗಳು ಕರ್ನಾಟಕ ಹೈಕೋರ್ಟ್‌ನ ಆದೇಶ ಪಾಲಿಸಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂತಹ ವಿಷಯಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಬೇಕು ಎಂದು ಖರ್ಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್, ಹಲಾಲ್‍ನಿಂದಾಗಿ ಬೆಲೆ ಏರಿಕೆಯ ಗಮನ ದೂರವಾಗಿದೆ: ಶಶಿ ತರೂರ್
Advertisement
Advertisement
ಪ್ರತಿಯೊಬ್ಬರೂ ಹೈಕೋರ್ಟ್‌ನ ಆದೇಶವನ್ನು ಪಾಲಿಸಬೇಕು. ಆದರೆ ಸಮಾಜದಲ್ಲಿ ಕೋಮು ಬಿರುಕುಗಳನ್ನು ಸೃಷ್ಟಿಸುವಾಗ ಕೇವಲ ಧ್ರುವೀಕರಣದ ರಾಜಕೀಯ ಉದ್ದೇಶಕ್ಕಾಗಿ ಇಂತಹ ಸಮಸ್ಯೆಗಳನ್ನು (ಆಜಾನ್ ಸಮಸ್ಯೆ) ತಂದು ಗದ್ದಲ ಎಬ್ಬಿಸಲಾಗಿದೆ. ಇದು ಸಾಮಾಜಿಕ ಮತ್ತು ಆರ್ಥಿಕವಾಗಿ ಪ್ರತಿಕೂಲವಾಗಿರುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಯಂತ್ರಣ ಸಾಧಿಸಿ, ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದು ತಿಳಿಸಿದ್ದಾರೆ.
Advertisement
ಹಿಜಬ್ ವಿಚಾರವಾಗಿ ಅಲ್‌ಖೈದಾ ಸಂಘಟನೆ ವ್ಯಕ್ತಿಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಚೋದಿಸಲು ಪ್ರಯತ್ನಿಸುವ ಜನರ ವಿರುದ್ಧ ಸರ್ಕಾರ ತನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಲ್ಲ PIL ಗಳನ್ನು ನಾವೇ ವಿಚಾರಣೆ ನಡೆಸುವುದಾದರೆ ಜನ ಸರ್ಕಾರವನ್ನು ಆಯ್ಕೆ ಮಾಡಿರುವುದ್ಯಾಕೆ? – ಸುಪ್ರೀಂಕೋರ್ಟ್ ಗರಂ
Advertisement
ಯಾರಾದರೂ ತಪ್ಪು ಕೆಲಸಗಳಲ್ಲಿ ತೊಡಗಿದರೆ, ಜನರು ಅವರನ್ನು ಬೆಂಬಲಿಸಬಾರದು. ಯಾರಾದರೂ ಪ್ರಚೋದಿಸಲು ಪ್ರಯತ್ನಿಸಿದರೆ, ನೀವು ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ವರ್ತಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.