ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು (Terror Attack) ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಹಲವು ನಾಯಕರು ಖಂಡಿಸಿದ್ದಾರೆ. ಈ ದಾಳಿಯ ಬಗ್ಗೆ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಈ ಹೇಯ ಕೃತ್ಯದ ಹಿಂದಿರುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
I strongly condemn the terror attack in Pahalgam, Jammu and Kashmir. Condolences to those who have lost their loved ones. I pray that the injured recover at the earliest. All possible assistance is being provided to those affected.
Those behind this heinous act will be brought…
— Narendra Modi (@narendramodi) April 22, 2025
ಪೋಸ್ಟ್‌ನಲ್ಲಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಗುಂಡು ಹಾರಿಸುವ ಮುನ್ನ ಪುರುಷರಿಗೆ ಇಸ್ಲಾಂನ ʻಕಲಿಮಾʼ ಪಠಿಸುವಂತೆ ಬೆದರಿಸಿದ್ದ ಉಗ್ರರು!
ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುತ್ತಿದೆ. ಈ ಹೇಯ ಕೃತ್ಯದ ಹಿಂದಿರುವ ಉಗ್ರರನ್ನು ಸುಮ್ಮನೆ ಬಿಡಲ್ಲ. ಅವರ ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅಮಾಯಕ ನಾಗರಿಕರ ಮೇಲಿನ ದಾಳಿ ಹೇಡಿತನ ಮತ್ತು ಅತ್ಯಂತ ಖಂಡನೀಯವಾದದ್ದು ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮುಗ್ಧರನ್ನು ಕೊಲ್ಲುವುದು ದುಷ್ಟತನ – ಪಹಲ್ಗಾಮ್ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್