ತೆಹ್ರಾನ್: ಇರಾನ್‍ನ (Iran) ಕುಖ್ಯಾತ ಎವಿನ್ ಜೈಲಿನಲ್ಲಿ (Evin Prison) ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಕೈದಿಗಳು ಸಾವನ್ನಪ್ಪಿದ್ದು, 61 ಕೈದಿಗಳು ಗಾಯಗೊಂಡಿರುವ ಘಟನೆ ನಡೆದಿದೆ.
ಈ ಜೈಲು ರಾಜಕೀಯ ಕೈದಿಗಳಿಗೆ ಹೆಸರುವಾಸಿಯಾಗಿದೆ. ಕಳೆದ ಕೆಲವು ವಾರಗಳ ಹಿಂದೆ ಹಿಜಬ್ ಧರಿಸದೇ ಇದ್ದಿದ್ದಕ್ಕೆ 22ರ ಹರೆಯದ ಮಹ್ಸಾ ಅಮಿನಿ ( Mahsa Amini) ಹೆಸರಿನ ಯುವತಿ ನೈತಿಕ ಪೊಲೀಸ್‍ಗಿರಿಗೆ ಬಲಿಯಾಗಿದ್ದಳು. ಆಕೆ ಸಾವಿನ ವಿರುದ್ಧ ಇರಾನ್‍ನಲ್ಲಿ ಪ್ರತಿಭಟನೆ ಭುಗಿಲೆದ್ದಿತು. ಸಾವಿರಾರು ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದರು.
Advertisement
Advertisement
ಈ ವೇಳೆ ಕೆಲವರನ್ನು ಬಂಧಿಸಿ ಇದೇ ಜೈಲಿನಲ್ಲಿ ಇಡಲಾಗಿತ್ತು. ಆದರೆ ಬೆಂಕಿ ಅವಘಡದಿಂದಾಗಿ ನಾಲ್ವರು ಸಾವನ್ನಪ್ಪಿದ್ದು, 61 ಮಂದಿಗೆ ಗಂಭೀರ ಗಾಯವಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಿವಾಹಿತನೊಂದಿಗೆ ಓಡಿ ಹೋಗಿದ್ದಕ್ಕೆ ಕಲ್ಲೆಸೆದು ಕೊಲ್ಲುವ ಶಿಕ್ಷೆ – ತಾನೇ ನೇಣಿಗೆ ಶರಣಾದ ಅಫ್ಘಾನ್ ಮಹಿಳೆ
Advertisement
Advertisement
ಆದರೆ ಇರಾನ್ ಮಾಧ್ಯಮವು ಎವಿನ್ ಜೈಲಿನಲ್ಲಿ ಉಂಟಾದ ಬೆಂಕಿ ಅವಘಡಕ್ಕೆ ಹಾಗೂ ಇರಾನ್‍ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಕಾಂಗ್ರೆಸ್‍ನ ಭವಿಷ್ಯ ಕಾರ್ಯಕರ್ತರ ಕೈಯಲ್ಲಿದೆ, ನನಗೆ ಗೆಲ್ಲುವ ಭರವಸೆ ಇದೆ: ಶಶಿ ತರೂರ್