ಕಾಬೂಲ್: ಅಫ್ಘಾನಿಸ್ತಾನದ (Afghanistan) ಮಾಜಿ ಪ್ರಧಾನಿ ಗುಲ್ಬುದ್ದೀನ್ ಹೆಕ್ಮತ್ಯಾರ್ (Gulbuddin Hekmatyar) ಕಟ್ಟಡದ ಮೇಲೆ ದಾಳಿ ನಡೆಸಲಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಹೆಕ್ಮತ್ಯಾರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಶುಕ್ರವಾರದ ಪ್ರಾರ್ಥನೆಗಾಗಿ ಹೆಕ್ಮತ್ಯಾರ್ ಮತ್ತು ಅವರ ಬೆಂಬಲಿಗರು ಹೋಗಿದ್ದ ಮಸೀದಿಯೊಂದಕ್ಕೆ ಪ್ರವೇಶಿಸಲು ಯತ್ನಿಸಿದ ಇಬ್ಬರು ದಾಳಿಕೋರರನ್ನು ಭದ್ರತಾ ಸಿಬ್ಬಂದಿ ಕೊಂದಿದ್ದಾರೆ ಎಂದು ಅಲ್ ಜಜೀರಾ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ವಿವಾಹಪೂರ್ವ ಸೆಕ್ಸ್ ಮಾಡಿದ್ರೆ 1 ವರ್ಷ ಜೈಲು – ಹೊಸ ಕಾನೂನು ಜಾರಿಗೆ ಇಂಡೋನೇಷ್ಯಾ ಸಜ್ಜು
Advertisement
Advertisement
ಕಾಬೂಲ್‌ನ ದಾರುಲಾಮನ್ ಪ್ರದೇಶದಲ್ಲಿ ಹಿಜ್ಬ್-ಎ-ಇಸ್ಲಾಮಿ ಪಕ್ಷದ ಹೆಕ್ಮತ್ಯಾರ್ ಕಟ್ಟಡದ ಮೇಲೆ ದಾಳಿ ನಡೆದಿದೆ. ದಾಳಿಕೋರರು ಮಹಿಳಾ ಬುರ್ಕಾಗಳನ್ನು ಧರಿಸಿ ಬಂದ ಆತ್ಮಹತ್ಯಾ ಬಾಂಬರ್‌ಗಳಾಗಿದ್ದರು. ಮಾಜಿ ಪ್ರಧಾನಿಯನ್ನು ಹತ್ಯೆ ಮಾಡುವ ಉದ್ದೇಶ ಹೊಂದಿದ್ದರು ಎಂದು ಅಲ್ ಜಜೀರಾ ವರದಿ ಮಾಡಿದೆ.
Advertisement
“ನನ್ನ ದೇಶವಾಸಿಗಳಿಗೆ ನಾನು ಭರವಸೆ ನೀಡುತ್ತೇನೆ. ನನಗೆ ಏನೂ ಆಗಿಲ್ಲ. ಅವರು ವಿಫಲ ಪ್ರಯತ್ನ ಮಾಡಿದ್ದಾರೆ” ಎಂದು ಹೆಕ್ಮತ್ಯಾರ್ ತಮ್ಮ ಹತ್ಯೆ ಸಂಚು ಕುರಿತು ಪ್ರತಿಕ್ರಿಯಿಸಿದ್ದಾರೆ. ಕಾಬೂಲ್‌ನಲ್ಲಿ ನಡೆದ ದಾಳಿಯ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ. ಇದನ್ನೂ ಓದಿ: ವಿದ್ಯಾರ್ಥಿನಿ ಶೂಟ್ ಮಾಡಿ ಅತ್ಯಾಚಾರವೆಸಗಿ ಕೊಂದ – ಮೃತದೇಹ ಪೀಸ್ ಮಾಡಿ ತಿಂದಿದ್ದ ವ್ಯಕ್ತಿ ನಿಧನ
Advertisement
ಕಳೆದ ವರ್ಷ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಅಶ್ರಫ್ ಘನಿ ಮತ್ತು ಇತರ ಮಾಜಿ ನಾಯಕರು ಪಲಾಯನವಾಗಿದ್ದರು. ಆದರೆ ಹೆಕ್ಮತ್ಯಾರ್ ಮಾತ್ರ ಕಾಬೂಲ್‌ನಲ್ಲಿಯೇ ಇದ್ದಾರೆ.