ಬೆಂಗಳೂರು: ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಸೋಮವಾರ ಆಮ್ ಆದ್ಮಿ ಪಕ್ಷವನ್ನು ಸೇರಲಿದ್ದಾರೆ.
ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ ಅವರು ಆಪ್ ಪಕ್ಷದ ಧ್ವಜ ಹಿಡಿಯಲಿದ್ದಾರೆ. ಈ ಸಂದರ್ಭದಲ್ಲಿ ಮನೀಶ್ ಸಿಸೋಡಿಯಾ ಮತ್ತಿತರ ನಾಯಕರು ಉಪಸ್ಥಿತರಿರುವ ಸಾಧ್ಯತೆಯಿದೆ. ಇದನ್ನೂ ಓದಿ: ವಿಶ್ವಕಪ್‍ನಲ್ಲಿ ದಾಖಲೆ ಬರೆದ ಮಿಚೆಲ್ ಸ್ಟಾರ್ಕ್, ಅಲಿಸ್ಸಾ ಹೀಲಿ ದಂಪತಿ
Advertisement
Last trip home after curtains down of 32 years in IPS. I have extreme gratitude to my family, the people of Karnataka and all my colleagues,friends,elders & young people in my life and finally the Governments of Karnataka across parties???????? heading into choppy seas pic.twitter.com/6oXcxn8htx
— Bhaskar Rao (@Nimmabhaskar22) April 2, 2022
Advertisement
ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ಸ್ವಯಂ ನಿವೃತ್ತಿ ಕೋರಿ ಸೆಪ್ಟೆಂಬರ್ 2021ರಲ್ಲಿ ಭಾಸ್ಕರ್ ರಾವ್ ರಾಜೀನಾಮೆ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು. ಆದರೆ ಈ ನಿರ್ಧಾರದಿಂದ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಸರ್ಕಾರ ರಾಜೀನಾಮೆಯನ್ನು ಅಂಗೀಕರಿಸಿತ್ತು. ಇದನ್ನೂ ಓದಿ: ಮಹಾರಾಷ್ಟ್ರದ ಹಳ್ಳಿಗೆ ಆಕಾಶದಿಂದ ಬಿತ್ತು ವಸ್ತು – ಚೀನಾದ ರಾಕೆಟ್ ಬಗ್ಗೆ ಅನುಮಾನ
Advertisement
1954ರಂದು ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು.