ಪಾಟ್ನಾ: ಪೊಲೀಸ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿ, 24 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಉತ್ತರ ಪ್ರದೇಶ ಹಾಗೂ ಬಿಹಾರದ ಪೊಲೀಸರು ಜಂಟಿಯಾಗಿ ಆರೋಪಿಯನ್ನು ಭಾರತ-ನೇಪಾಳ ಗಡಿ ಭಾಗದಲ್ಲಿ ಸೆರೆ ಹಿಡಿದಿದ್ದಾರೆ.
ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಗೋವಿಂದಗಂಜ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಂಜನ್ ತಿವಾರಿ 1998ರಲ್ಲಿ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದ. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗೆ 25,000 ರೂ. ಬಹುಮಾನವನ್ನು ಘೋಷಿಸಲಾಗಿತ್ತು. ಆದರೆ 2 ದಶಕಗಳವರೆಗೂ ಆರೋಪಿಯ ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಕೊಡಗು ಎಸ್‍ಪಿಗೆ ಯಾವ ರೋಗ ಬಂದಿತ್ತು: ಸಿದ್ದರಾಮಯ್ಯ ವಾಗ್ದಾಳಿ
Advertisement
Advertisement
ಆರೋಪಿ ರಕ್ಸಾಲ್ ಮೂಲಕ ಕಠ್ಮಂಡುವಿಗೆ ಪಲಾಯನ ಮಾಡಲು ಯತ್ನಿಸುತ್ತಿದ್ದುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ಉತ್ತರ ಪ್ರದೇಶದ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಆರೋಪಿಯ ವಿರುದ್ಧ ಬಿಹಾರದಲ್ಲಿ ದಾಖಲಾಗಿರುವ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೂರ್ವ ಚಂಪಾರಣ್ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಆಶಿಶ್ ತಿಳಿಸಿದ್ದಾರೆ. ಇದನ್ನೂ ಓದಿ: ಟಿಎಂಸಿ ನಾಯಕನಿಗೆ ಶೂನಲ್ಲಿ ಹೊಡೆಯುತ್ತೇವೆ: ವಿವಾದ ಸೃಷ್ಟಿಸಿದ ದಿಲೀಪ್ ಘೋಷ್ ಹೇಳಿಕೆ