ಬೆಂಗಳೂರು: ಮಾಜಿ ಬಾಯ್‌ಫ್ರೆಂಡ್ (Ex Boyfriend) ಪ್ರೇಯಸಿಯ ಹೊಸ ಲವ್ವರ್‌ಗೆ ಚಾಕು ಇರಿದ (Stab) ಘಟನೆ ಬೆಂಗಳೂರಿನ (Bengaluru) ವೈಯಾಲಿ ಕಾವಲ್ (Vyalikaval) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಂದನ್, ಹಳೆ ಬಾಯ್ ಫ್ರೆಂಡ್‌ನಿಂದ ಚಾಕು ಇರಿತಕ್ಕೆ ಒಳಗಾದ ಯುವಕ. ಯತೀಶ್ ಎಂಬಾತ ಚಂದನ್‌ಗೆ ಚಾಕು ಇರಿದಿದ್ದಾನೆ. ವೈಯಾಲಿ ಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯ ಜಟಕಾ ಸ್ಟ್ಯಾಂಡ್ ಬಳಿ ಶುಕ್ರವಾರ ರಾತ್ರಿ ಘಟನೆ ನಡೆದಿದೆ. ಚಂದನ್ ಅದೇ ಏರಿಯಾದ ಯುವತಿಯೊಬ್ಬಳನ್ನ ಪ್ರೀತಿಸುತ್ತಿದ್ದ. ಯುವತಿ ಕೂಡ ಚಂದನ್‌ನನ್ನು ಪ್ರೀತಿಸುತ್ತಿದ್ದಳು. ಈ ಹಿಂದೆ ಯುವತಿ ಯತೀಶ್ ಎಂಬಾತನ್ನ ಪ್ರೀತಿಸುತ್ತಿದ್ದಳಂತೆ. ಯುವತಿ ಮತ್ತೊಬ್ಬ ಯುವಕನನ್ನ ಪ್ರೀತಿಸುತ್ತಿದ್ದ ವಿಚಾರ ಯತೀಶ್‌ಗೆ ತಿಳಿದು ಚಂದನ್‌ನನ್ನು ಮಾತುಕತೆಗೆ ಅಂತಾ ಕರೆಸಿ ಯತೀಶ್ ಅಂಡ್ ಗ್ಯಾಂಗ್ ಚಾಕು ಇರಿದಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ಹಣ – ಹೇಳಿಕೆ ಖಂಡಿಸಿ ಯತ್ನಾಳ್ ಕಾರ್‌ಗೆ ಘೇರಾವ್ ಹಾಕಲು ಯತ್ನ
ಘಟನೆ ಬಳಿಕ ರಕ್ತ ಸಿಕ್ತ ಮೈಯಲ್ಲೇ ನಿತ್ರಾಣನಾಗಿದ್ದ ಚಂದನ್, ಸ್ನೇಹಿತರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ. ಘಟನಾ ಸ್ಥಳಕ್ಕೆ ತೆರಳಿದ ಚಂದನ್ ಸ್ನೇಹಿತರು ರಕ್ಷಣೆ ಮಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಐಸಿಯುನಲ್ಲಿ ಚಂದನ್ ಚಿಕಿತ್ಸೆ ಪಡೆಯುತ್ತಿದ್ದು ಗಂಭೀರ ಸ್ಥಿತಿಯಲ್ಲಿದ್ದಾನೆ. ಘಟನೆ ಸಂಬಂಧ ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: Ramanagara | ರಸ್ತೆಯಲ್ಲಿ ವೀಲ್ಹಿಂಗ್ ಮಾಡಿ ವಾಹನ ಸವಾರರಿಗೆ ತೊಂದರೆ – ನಾಲ್ವರ ಬಂಧನ