ಬೆಂಗಳೂರು: ಪ್ರತಿದಿನ ನನ್ನನ್ನು `ಟಗರು’ `ಟಗರು’ ಎಂದು ಹಾಡು ಕಟ್ಟಿ ತೋರಿಸುತ್ತಾರೆ. ಟಗರು ಗುಮ್ಮುತ್ತೆ, ಆದರೆ ನಾನು ಯಾರಿಗೆ ಗುಮ್ಮಿದ್ದೇನೆ? ನಾನೂ ಅವಮಾನ ಮಾಡಿದ್ದಾರೆ ಅಂತಾ ಕೋಪಮಾಡಿಕೊಳ್ಳಬಹುದಲ್ಲಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ.
ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ ಪಡೆದಿದೆ.
ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ @narendramodi ಅವರ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿ @BSBommai ಅವರನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?
ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲಾ? 7/10
— Siddaramaiah (@siddaramaiah) January 5, 2023
Advertisement
ಸಿದ್ದರಾಮಯ್ಯ ಅವರು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ನಾಯಿ ಮರಿಗೆ ಹೋಲಿಕೆ ಮಾಡಿ ಟೀಕಿಸಿದ್ದರು. ಇದರಿಂದ ಮುಗಿಬಿದ್ದ ಬಿಜೆಪಿ (BJP) ನಾಯಕರು ಕಾಂಗ್ರೆಸ್ ಪಕ್ಷವನ್ನ ನಾಯಿ, ಬೆಕ್ಕು, ಇಲಿಗೆ ಹೋಲಿಸಿ ತೀವ್ರ ವಾಗ್ದಾಳಿ ನಡೆಸಿದ್ದರು. ಸಿಎಂ ಬೊಮ್ಮಾಯಿ ಸಹ ನಾನು ರಾಜ್ಯದ ಜನರ ಹಿತಕಾಯುವ ನಿಯತ್ತಿನ ನಾಯಿ, ಅಧಿಕಾರ ಸಿಕ್ಕಿದೆ ಎಂದು ಜನರನ್ನು ತಿನ್ನುವ ತೋಳ ಅಲ್ಲ ಎಂದು ತಿರುಗೇಟು ನೀಡಿದ್ದರು. ಆದರೂ ತಮ್ಮ ಹೇಳಿಕೆಯನ್ನು ಸಿದ್ದರಾಮಯ್ಯ (Siddaramaiah) ಅವರು ಸಮರ್ಥಿಸಿಕೊಂಡಿದ್ದು, ಸರಣಿ ಟ್ವೀಟ್‌ಗಳ ಮೂಲಕ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮುಂದಿನ ತಿಂಗಳು ಪ್ರಧಾನಿ, ರಾಷ್ಟ್ರಪತಿಗಳಿಂದ ದಶಪಥ ರಸ್ತೆ ಲೋಕಾರ್ಪಣೆ
Advertisement
Advertisement
ಟ್ವೀಟ್‌ನಲ್ಲಿ ಏನಿದೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನ ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಇದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ. ಇದನ್ನೂ ಓದಿ: ಒಟ್ಟಾಗಿ ‘ಹಾಸ್ಟೆಲ್ ಹುಡುಗರ’ ಸಾಂಗ್ ರಿಲೀಸ್ ಮಾಡಿದ ಸ್ಯಾಂಡಲ್ ವುಡ್ ತಾರೆಯರು
Advertisement
ಪುಕ್ಕಲು ಸ್ವಭಾವದವರು, ಧೈರ್ಯ ಇಲ್ಲದವರು ಎನ್ನುವ ಅರ್ಥದಲ್ಲಿ ಹಳ್ಳಿ ಭಾಷೆಯಲ್ಲಿ ನಾಯಿ ಮರಿ (Dog) ಎಂದಿದ್ದೇ ಹೊರತು ಕರ್ನಾಟಕದ ಮುಖ್ಯಮಂತ್ರಿ ಅವರನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತಾ ಇರಲಿಲ್ಲ. ಪ್ರಾಣಿ-ಪಕ್ಷಿ-ಹೂ-ಹಣ್ಣುಗಳನ್ನು ಅವುಗಳ ಸ್ವಭಾವಗಳ ಸಾಮ್ಯತೆಗೆ ಅನುಗುಣವಾಗಿ ಮನುಷ್ಯರಿಗೆ ಹೋಲಿಸುವುದು ಜನಪದ ಸಂಸ್ಕೃತಿ. ಯಾವ ಪ್ರಾಣಿ-ಪಕ್ಷಿಯೂ ಕೀಳೂ ಅಲ್ಲ, ಮೇಲೂ ಅಲ್ಲ.
ಹುಲಿ ಮನುಷ್ಯರನ್ನು ಕೊಂದು ತಿನ್ನುವ ಪ್ರಾಣಿ. ಬಿಜೆಪಿ ನಾಯಕರೇ ಬಿ.ಎಸ್ ಯಡಿಯೂರಪ್ಪ ಅವರನ್ನು `ರಾಜಾ ಹುಲಿ’ ಎಂದು ಬಣ್ಣಿಸುತ್ತಾರೆ. ಇದನ್ನೂ ಅವಮಾನ ಎಂದು ತಿಳಿದುಕೊಳ್ಳಬಹುದಲ್ಲಾ? ಪ್ರತಿದಿನ ನನ್ನನ್ನು `ಟಗರು’ ‘ಟಗರು’ ಎಂದು ಹಾಡು ಕಟ್ಟಿ ತೋರಿಸುತ್ತಾರೆ. ಟಗರು ಗುಮ್ಮುತ್ತೆ, ನಾನು ಯಾರಿಗೆ ಗುಮ್ಮಿದ್ದೇನೆ? ನಾನು ಅವಮಾನ ಮಾಡಿದ್ದಾರೆ ಎಂದು ಕೋಪಮಾಡಿಕೊಳ್ಳಬಹುದಲ್ಲಾ?
ಸಾವಿರಾರು ಮಂದಿ ಹತ್ಯೆಗೀಡಾದ ಗುಜರಾತ್ ಗಲಭೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ `ಕಾರಿಗೆ ಅಡ್ಡಬಂದು ನಾಯಿಮರಿ ಸತ್ತರೆ ಏನು ಮಾಡೋಣ’ ಎಂದು ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹೇಳಿದ್ದರು. ಇದೂ ವಿವಾದವಾಗಿತ್ತಲ್ಲವೇ?
ಸಾವಿರಾರು ಮಂದಿ ಹತ್ಯೆಗೀಡಾದ ಗುಜರಾತ್ ಗಲಭೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ "ಕಾರಿಗೆ ಅಡ್ಡಬಂದು ನಾಯಿಮರಿ ಸತ್ತರೆ ಏನು ಮಾಡೋಣ?" ಎಂದು ಆಗಿನ ಗುಜರಾತ್ ಮುಖ್ಯಮಂತ್ರಿ @narendramodi ಹೇಳಿದ್ದರು. ಇದೂ ವಿವಾದವಾಗಿತ್ತಲ್ಲವೇ? 6/10
— Siddaramaiah (@siddaramaiah) January 5, 2023
ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ ಪಡೆದಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನರೇಂದ್ರ ಮೋದಿ ಅವರ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ? ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲಾ ಎಂದು ಕುಟುಕಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k