ನಿರಂತರ ಪ್ರವಾಸದಿಂದ ಒತ್ತಡ, ವಿಶ್ರಾಂತಿಗೆ ಸಲಹೆ ನೀಡಿದ ವೈದ್ಯರು
ಬೆಂಗಳೂರು: ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಹಿನ್ನೆಲೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಸತ್ಯ ಮಾತನಾಡಿದ್ದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧ – ಸರ್ಕಾರಿ ಬಂಗಲೆ ತೊರೆದ ರಾಗಾ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಹೆಚ್‌ಡಿಕೆ, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಜೈಲು ಸೇರಿರುವ ಮಕ್ಕಳನ್ನ ಬಿಡುಗಡೆ ಮಾಡಿಸುವಂತೆ ಮುಖಂಡರ ಮುಂದೆ ಮುಸ್ಲಿಂ ಮಹಿಳೆಯರ ಕಣ್ಣೀರು