ಬೆಂಗಳೂರು: ರಾಜ್ಯದಲ್ಲಿ ಮುಂದುವರೆದ ರೈತರ (Farmer) ಆತ್ಮಹತ್ಯೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು (H.D.Kumaraswamy) ಸರ್ಕಾರದ ವಿರುದ್ಧ ಟ್ವಿಟ್ಟರ್‌ನಲ್ಲಿ ಚಾಟಿ ಬೀಸಿದ್ದಾರೆ. ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬೆಳ್ಳಂ ಬೆಳಗ್ಗೆ ವರದಿ ಓದಿದ ತಕ್ಷಣ ಬಹಳ ಸಂಕಟವಾಯಿತು, ಕಣ್ಣಲ್ಲಿ ನೀರು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್ (Congress) ಸರ್ಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯೇ? ಇವರಿಗೆ ವಾಸ್ತವ ಅರಿವಿಲ್ಲವೆ? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಪೂಜೆಗೆ ತೆರಳಿದ್ದ ವೈದ್ಯ ಹೇಮಾವತಿ ನದಿಯಲ್ಲಿ ಮುಳುಗಿ ಸಾವು
ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ ಎಂದು ಬೀಗುತ್ತಿರುವ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ `ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯೇ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರವಾಗಿದೆ. ಇದು ನೈಜಸ್ಥಿತಿಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಆಗಸ್ಟ್, ಸೆಪ್ಟೆಂಬರ್‌ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರ್ಕಾರ, ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ? ಎಂದು ಸರ್ಕಾರವನ್ನು ತಿವಿದಿದ್ದಾರೆ.
ಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ. ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ. ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ ಎಂದು ಪ್ರಶ್ನಿಸಿದ್ದಾರೆ.
ನನ್ನ ಮನವಿ ಇಷ್ಟೇ, ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ. ನಿಮ್ಮೊಂದಿಗೆ ನಾನಿದ್ದೇನೆ. ಸರ್ಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ ಎಂದು ಅವರು ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ. ಟ್ವೀಟ್‍ನ್ನು ರೈತರಿಗೆ ಮಾರಿ ಕರ್ನಾಟಕ ಮಾದರಿ ಎಂದು ಟ್ಯಾಗ್ ಬಳಸಿ ಅವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ವರ್ಗಾವಣೆ ಮಾಡಿದರೂ ಜಾಗ ಖಾಲಿ ಮಾಡದ ಮುಕ್ತ ವಿವಿ ಹಣಕಾಸು ಅಧಿಕಾರಿ!
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]