ಹುಬ್ಬಳ್ಳಿ: ಸಮ್ಮಿಶ್ರ ಸರ್ಕಾರದಲ್ಲಿ ಸದ್ಯ ಮುಖ್ಯಮಂತ್ರಿಯ ಬದಲಾವಣೆ ವಿಚಾರ ಬರಲ್ಲ, ಏಕೆಂದರೆ ಆ ಸೀಟು ಖಾಲಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಜಾರಿಯಲ್ಲಿದ್ದು, ಸದ್ಯ ಜೆಡಿಎಸ್ ಪಕ್ಷದಿಂದ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾರೆ. ಅದ್ದರಿಂದ ಸದ್ಯ ಸಿಎಂ ಸ್ಥಾನ ಖಾಲಿಯಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಹಿರಿಯ ಮುಖಂಡರು ಸಿಎಂ ಆಗುವ ಆರ್ಹತೆ ಹೊಂದಿದ್ದಾರೆ. ಆಗೆಯೇ ಪರಮೇಶ್ವರ್ ಅವರು ಕೂಡ ತಮ್ಮ ಆಸೆ ತಿಳಿಸಿದ್ದಾರೆ. ಅದರಲ್ಲಿ ತಪ್ಪೇನು ಇಲ್ಲ. ಯಾರು ಸಿಎಂ ಆಗಬೇಕು ಎಂದರೂ ಶಾಸಕರು, ಹೈಕಮಾಂಡ್ ಮಾತ್ರ ತೀರ್ಮಾನ ಮಾಡಲು ಸಾಧ್ಯ ಎಂದು ತಿಳಿಸಿದರು.
ಕೇಂದ್ರ ಸರ್ಕಾರದಿಂದ ಸಿಬಿಐ ದುರುಪಯೋಗ ಆಗುತ್ತಿದೆ. ಯಾವುದೇ ರಾಜ್ಯದಲ್ಲಿ ಸಿಬಿಐ ತನಿಖೆ ನಡೆಸಬೇಕಾದರೆ ಆಯಾ ರಾಜ್ಯದ ಅನುಮತಿ ಪಡೆಯಬೇಕು ಎನ್ನುವ ನಿಯಮವೇ ಇದೆ. ಇದನ್ನು ಕೇಂದ್ರ ದುರುಪಯೋಗ ಮಾಡಿಕೊಳ್ಳುತ್ತಿದೆ. ಇಂದಿರಾ ಕ್ಯಾಂಟೀನ್‍ನಿಂದ ಬಡವರ ಹಸಿವು ನೀಗಿದೆ. ಇದರ ಶ್ರೇಯ ನಮ್ಮ ಪಕ್ಷಕ್ಕೆ ಸೇರಬಾರದು ಎನ್ನುವ ದುರುದ್ದೇಶದಿಂದ ಬಿಜೆಪಿ ಸಂಚು ಮಾಡಿ ಬಿಜೆಪಿಯವರು ಅಡ್ಡಗಾಲು ಹಾಕುತ್ತಿದ್ದಾರೆ. ನೆಹರೂ ಅವರನ್ನು ಹಿಟ್ಲರ್ ಎಂದು ಕರೆಯುವ ಆರ್‍ಎಸ್‍ಎಸ್ ನವರು ಫ್ಯಾಸಿಸ್ಟ್ ಮನೋಭಾವ ಹೊಂದಿದ್ದಾರೆ. ಬಿಜೆಪಿಯವರು ಹಿಟ್ಲರ್ ನಂತೆ ಆಡಳಿತ ನಡೆಸುತ್ತಿದ್ದಾರೆ. ಅವರು ಹಿಟ್ಲರ್ ವಂಶದವರು ಎಂದು ಟೀಕಿಸಿದರು.
ಇದೇ ವೇಳೆ ಸಂಪುಟ ವಿಸ್ತರಣೆ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಶೀಘ್ರವೇ ಸಂಪುಟ ವಿಸ್ತರಣೆ ನಡೆಯಲಿದ್ದು, ದೇಶದ ಪ್ರಮುಖ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಸಮಯದ ನಿಗದಿಯಾಗಬೇಕಿದೆ. ಈ ಕುರಿತು ಚರ್ಚೆ ನಡೆಸಲು ಶೀಘ್ರವೇ ರಾಹುಲ್ ಗಾಂಧಿ ಅವರ ಬಳಿ ಸಮಯ ನಿಗದಿ ಮಾಡಲಾಗುವುದು. ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews