ಬೆಳಗಾವಿ: ನಮ್ಮ ಮುಖ್ಯಮಂತ್ರಿ (Chief Minister) ದುರ್ಬಲ ಸಿಎಂ. ಕೇಂದ್ರ ಸಚಿವ ಅಮಿತ್ ಶಾ (Amit Shah) ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವ್ಯಂಗ್ಯವಾಡಿದ್ದಾರೆ.
ಬೆಳಗಾವಿ ಗಡಿ ಸಂಘರ್ಷಕ್ಕೆ (Belagavi Controversy) ಸಂಬಂಧಿಸಿದಂತೆ ಮಾತನಾಡಿದ ಅವರು, ಕರ್ನಾಟಕದ ಮುಖ್ಯಮಂತ್ರಿ ವೀಕ್ ಸಿಎಂ. ಕೇಂದ್ರ ಗೃಹ ಸಚಿವರು ಕರೆದು ಮಾತಾನಾಡಿದ್ರೂ ಗಲಾಟೆ ಆಗ್ತಿದೆ. ನಮ್ಮ ಸಿಎಂ ಗಟ್ಟಿ ಧ್ವನಿಯಲ್ಲಿ ಹೇಳಬೇಕಿತ್ತು, ಆದರೂ ದೊಡ್ಡ ಹೇಳಿಕೆಯನ್ನೇನು ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
Advertisement
Advertisement
ಅಮಿತ್ ಶಾ ಶಾಂತಿ ಕಾಪಾಡಿ ಅಂದರೂ, ಮಹಾರಾಷ್ಟ್ರದವರು (Maharashtra) ಶಾಂತಿ ಕಾಪಾಡ್ತಿಲ್ಲ. ಅಮಿತ್ ಶಾ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಟೀಕಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆ ಜನರಿಗೆ ಅನ್ಯಾಯ – ಶಾಸಕ ದಿನೇಶ್ ಗೂಳಿಗೌಡ ಅಸಮಾಧಾನ
Advertisement
Advertisement
ಕರ್ನಾಟಕ, ಮಹಾರಾಷ್ಟ್ರ, ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ (BJP Government) ಇದೆ. ತ್ರಿಬಲ್ ಇಂಜಿನ್ ಸರ್ಕಾರ ಇದ್ದರೂ ಪ್ರಯೋಜನವಾಗ್ತಿಲ್ಲ. ರಾಜ್ಯದ ನೆಲ-ಜಲ-ಭಾಷೆ ವಿಚಾರದಲ್ಲಿ ನಾವೆಲ್ಲರೂ ಒಂದಾಗುತ್ತೇವೆ. ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮವಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ಅಕ್ರಮವಾಗಿ ಸಂಪಾದನೆ ಮಾಡಿದ್ರೆ, ಅಷ್ಟೂ ಆಸ್ತಿ ದಾನ ಮಾಡ್ತೀನಿ – ಸಿ.ಟಿ ರವಿ
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಗಡಿ ಭಾಗದಲ್ಲಿ ಎರಡೂ ರಾಜ್ಯಗಳ ಬಸ್‌ಗಳಿಗೆ ಮಸಿ ಬಳಿದು ಆಕ್ರೋಶ ಕೂಡ ಹೊರಹಾಕಲಾಗಿತ್ತು. ವಿವಾದ ಉಲ್ಬಣವಾಗುತ್ತಿರುವುದನ್ನು ಅರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಎರಡೂ ರಾಜ್ಯಗಳ ಸಿಎಂ ಜೊತೆ ಸಭೆ ನಡೆಸಲಾಯಿತು. ಆದರೆ ಯಾವುದಕ್ಕೂ ಕ್ಯಾರೆ ಎನ್ನದ ಎಂಇಎಸ್ ಪುಂಡರು ಕರ್ನಾಟಕ ಗಡಿ ಪ್ರವೇಶಿಸಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ತಡೆದು ಕ್ರಮ ಜರುಗಿಸಿದ್ದಾರೆ. ಈ ಬೆನ್ನಲ್ಲೇ ಶಿವಸೇನಾ ಸಂಸದ ಸಂಜಯ್ ರಾವತ್ `ಚೀನಾ, ಭಾರತದ ಗಡಿ ನುಗ್ಗಿದಂತೆ ನಾವು ಕರ್ನಾಟಕ್ಕೆ ನುಗ್ಗುತ್ತೇವೆ ಎಂದು ನೀಡಿರುವ ಹೇಳಿಕೆ’ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.