ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ನಮಗೇ ಬೇಕು ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸದ್ಯ ಈ ವಿಷಯದಲ್ಲಿ ತಲೆ ಹಾಕುವುದಿಲ್ಲ ಎಂದು ಹೇಳುವ ಮೂಲಕ ಮೈಸೂರು ಮೈತ್ರಿ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಮೈಸೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದು, ಇಲ್ಲೂ ಎರಡು ಪಕ್ಷಗಳಿಗೆ ಬಹುಮತ ಲಭಿಸಿಲ್ಲ. ಅದ್ದರಿಂದ ಮೈತ್ರಿ ಚರ್ಚೆ ನಡೆಸಲಾಗುತ್ತಿದೆ. ಅದ್ದರಿಂದ ಈ ಪ್ರಕ್ರಿಯೆಯನ್ನು ಪಕ್ಷದ ಇತರೇ ಮುಖಂಡರು ನೋಡಿಕೊಳ್ಳುತ್ತಾರೆ. ಇದರಲ್ಲಿ ನನ್ನ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು.
Advertisement
Advertisement
ಮೇಯರ್ ಆಯ್ಕೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರದ ದಿನೇಶ್ ಗುಂಡೂರಾವ್ ಅವರಿಗೆ ಹೇಳಿದ್ದೇನೆ. ನಾನು ಈ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ, ಸಚಿವ ಸಾ.ರಾ. ಮಹೇಶ್ ಅವರೊಂದಿಗೂ ಮಾತನಾಡಿಲ್ಲ. ದಿನೇಶ್ ಗುಂಡೂರಾವ್ ಅವರೇ ಎಲ್ಲರೊಂದಿಗೂ ಚರ್ಚೆ ನಡೆಸುತ್ತಾರೆ. ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವ ಇಬ್ಬರೂ ಜೆಡಿಎಸ್ ಪಕ್ಷದ ಮುಖಂಡರೇ ಆಗಿದ್ದಾರೆ. ಹೀಗಾಗಿ ಕಾಂಗ್ರೆಸ್ ವಾಯ್ಸ್ ಇರಬೇಕು ಎಂಬ ಕಾರಣ ಮೇಯರ್ ಸ್ಥಾನ ಕೇಳುತ್ತಿದ್ದೇವೆ. ಹೀಗಾಗಿ ಮೈಸೂರಿನಲ್ಲಿ ಮೈತ್ರಿ ಆಡಳಿತದಲ್ಲಿ ಮೇಯರ್ ಆಗುತ್ತಾರೆ ಎಂದರು.
Advertisement
ಪಾಲಿಕೆ ಸದಸ್ಯರು ಈ ಹಿಂದೆ ನಾನು ಭೇಟಿ ನೀಡಿದ ಸಂದರ್ಭದಲ್ಲಿ ಮೇಯರ್ ಸ್ಥಾನ ನಮ್ಮ ಪಕ್ಷಕ್ಕೆ ಬೇಕು ಎಂದು ಹೇಳಿದ್ದಾರೆ. ಅದರಂತೆ ನಾನು ದಿನೇಶ್ ಗುಂಡೂರಾವ್ ಅವರಿಗೆ ಮಾಹಿತಿ ನೀಡಿದ್ದೇನೆ. ಆದರೆ ಜೆಡಿಎಸ್ ಪಾಲಿಕೆ ಸದಸ್ಯರು ರೆಸಾರ್ಟ್ ಗೆ ಹೋಗಿರುವ ಬಗ್ಗೆ ಮಾಹಿತಿ ಇಲ್ಲ. ಅವರ ಪಕ್ಷದ ಸದಸ್ಯರನ್ನು ರಕ್ಷಣೆ ಮಾಡಿಕೊಳ್ಳುವುದಕ್ಕೆ ಅವರು ಹೋಗಿರಬೇಕು ಅಷ್ಟೇ ಎಂದ್ರು.
Advertisement
ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸದಸ್ಯರು ತಮ್ಮ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುನ್ನಡೆ ತೆಗೆದುಕೊಳ್ಳುತ್ತಾರೆ ಎಂಬ ಭಾವನೆ ಹೊಂದಿದ್ದರು. ಆದರೆ ಇಂದು ಸಿದ್ದರಾಮಯ್ಯ ಅವರ ಹೇಳಿಕೆ ಇಂದ ಪಕ್ಷದ ಕಾರ್ಯಕರ್ತರು ನಿರಾಸೆ ಅನುಭವಿಸಿದ್ದಾರೆ ಎಂದು ಹೇಳಬಹುದು. ಆದರೆ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ಇಂದು ಸಿದ್ದರಾಮಯ್ಯ ನಿವಾಸದಲ್ಲಿ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ತೀರ್ಮಾನ ತಿಳಿಸಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಸದಸ್ಯರು ಸಿದ್ದರಾಮಯ್ಯ ಅವರ ನಿವಾಸದ ಬಳಿ ಆಗಮಿಸಿದ್ದಾರೆ. ಇತ್ತ ಜೆಡಿಎಸ್ ಮಾತ್ರ ತಮ್ಮ ಪಕ್ಷದ ಮತದಾರರ ಸಂಖ್ಯೆ ಹೆಚ್ಚಾಗಿರುವುದರಿಂದ ನಮಗೇ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಪಟ್ಟು ಹಿಡಿದಿದೆ.
ಮಹಾನಗರ ಪಾಲಿಕೆ ಪಕ್ಷಗಳ ಬಲ ಬಲ ಇಂತಿದೆ:
ಮೈಸೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 65 ಸದಸ್ಯ ಸ್ಥಾನಗಳಿದ್ದು ಇದರಲ್ಲಿ 22 ಸದಸ್ಯರನ್ನು ಬಿಜೆಪಿ ಹೊಂದಿದ್ದರೆ, ಕಾಂಗ್ರೆಸ್ 19 ಸ್ಥಾನ ಹಾಗೂ ಜೆಡಿಎಸ್ 18 ಸ್ಥಾನ ಹೊಂದಿದೆ. ಉಳಿದಂತೆ ಪಕ್ಷೇತರರು 5 ಹಾಗೂ ಬಿಎಎಸ್‍ಪಿ 1 ಸ್ಥಾನ ಪಡೆದಿದೆ. ಸದ್ಯ ಪಾಲಿಕೆಯಲ್ಲಿ ಮೇಯರ್ ಸ್ಥಾನ ಪಡೆಯಲು 37 ಮ್ಯಾಜಿಕ್ ನಂಬರ್ ಆಗಿದೆ. ಉಳಿದಂತೆ ಕ್ಷೇತ್ರದ 4 ಶಾಸಕರು ಹಾಗೂ 4 ವಿಧಾನ ಪರಿಷತ್ ಸದಸ್ಯರು ಹಾಗೂ ಓರ್ವ ಸಂಸದರು ಕೂಡ ಮತ ಚಲಾಯಿಸಲಿದ್ದಾರೆ. ಇದರಲ್ಲಿ ಜೆಡಿಎಸ್ 22, ಕಾಂಗ್ರೆಸ್ 21 ಹಾಗೂ ಬಿಜೆಪಿ 25 ಮತಗಳ ಬಲ ಹೊಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews