ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ತಿಹಾರ್ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಲು ಬರಲ್ಲ.
ಹೌದು. ಕಾಂಗ್ರೆಸ್ಸಿನ ಬಹುತೇಕ ನಾಯಕರು ಡಿಕೆಶಿ ಸ್ವಾಗತಕ್ಕೆ ಕೆಪಿಸಿಸಿಯತ್ತ ಮುಖ ಮಾಡಿದರೆ ಸಿದ್ದರಾಮಯ್ಯ ಮಾತ್ರ ಡಿಕೆಶಿ ಸ್ವಾಗತದಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: 2 ತಿಂಗ್ಳ ನಂತ್ರ ಬೆಂಗ್ಳೂರಿಗೆ ಕನಕಪುರ ಬಂಡೆ – ಏರ್‌ಪೋರ್ಟ್‌ನಿಂದ ಕಾಂಗ್ರೆಸ್ ಕಚೇರಿವರೆಗೆ ಮೆರವಣಿಗೆ
Advertisement
Advertisement
ಡಿಕೆಶಿ ಬೆಂಗಳೂರಿಗೆ ಬರುತ್ತಿದ್ದರೆ ಸಿದ್ದರಾಮಯ್ಯ ಗದಗಕ್ಕೆ ತೆರಳಲಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ಸಿಎಂ ಹೊರಟು ನಿಂತಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಬರುವ ಸಮಯದಲ್ಲಿ ಅತ್ತ ಸಿದ್ದರಾಮಯ್ಯ ಗದಗದಲ್ಲಿ ಜಿಲ್ಲಾ ಕಾಂಗ್ರೆಸ್ ನಿಂದ ಸನ್ಮಾನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಹೀಗೆ ಡಿಕೆಶಿ ಸ್ವಾಗತ ಕಾರ್ಯಕ್ರಮದಿಂದ ಸಂಪೂರ್ಣ ಅಂತರ ಕಾಯ್ದುಕೊಳ್ಳಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದೆ.
Advertisement
ಎಐಸಿಸಿ ಮಾತನ್ನು ಮೀರಿದ ಸಿದ್ದರಾಮಯ್ಯರ ಈ ವರ್ತನೆ ಕಾಂಗ್ರೆಸ್ಸಿನಲ್ಲಿ ಸಿದ್ದರಾಮಯ್ಯ ವಿರೋಧಿ ಬಣದ ಕೈಗೆ ಹೊಸ ಅಸ್ತ್ರ ನೀಡಿದಂತಾಗಿದೆ ಎಂದು ಹೇಳಲಾಗುತ್ತಿದೆ.