ಬೆಂಗಳೂರು: ಸಹೋದರನಿಂದಲೇ ಹಲ್ಲೆಗೊಳಗಾಗಿದ್ದ ಮಾಜಿ ಕಾರ್ಪೊರೇಟರ್ ಪತಿ ಆಯುಬ್ ಖಾನ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
Advertisement
ಬಿಬಿಎಂಪಿ 139 ವಾರ್ಡ್ನ ಮಾಜಿ ಕಾರ್ಪೋರೇಟರ್ ನಜೀಮಾ ಪತಿ ಆಯುಬ್ ಖಾನ್ ಮೇಲೆ ಸಹೋದರನಿಂದಲೇ ಮಾರಣಾಂತಿಕ ಹಲ್ಲೆ ನಡೆದಿತ್ತು. ಚಾಕು ಇರಿದು ಮನಸ್ಸೋ ಇಚ್ಛೆ ಥಳಿಸಿದ್ದರು. ಅಲ್ಲದೆ ಆಯುಬ್ ಸಹೋದರ ಹೊಟ್ಟೆ ಹಾಗೂ ಮೂತ್ರ ವಿಸರ್ಜನಾ ಸಂಚಿ ಭಾಗಕ್ಕೆ ಚಾಕುವಿನಿಂದ ಇರಿದಿದ್ದನು. ಚಾಕು ಇರಿದ ಜಾಗದಲ್ಲಿ ಸತತವಾಗಿ ರಕ್ತಸ್ರಾವವಾಗುತ್ತಿತ್ತು.
Advertisement
Advertisement
ಘಟನೆ ನಡೆದ ಕೂಡಲೇ ಆಯುಬ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆ ಬಳಿ ಆಯುಬ್ ಖಾನ್ ಸಂಬಂಧಿಕರು ಜಮಾಯಿಸಿದ್ದಾರೆ. ಇದನ್ನೂ ಓದಿ: ಕರಾವಳಿ, ಮಲೆನಾಡಿನಲ್ಲಿ ಮುಂದುವರಿದ ಮಳೆ ಅವಾಂತರ – 10 ದಿನದ ಹಿಂದೆ ಕೊಚ್ಚಿಹೋದ ಬಾಲಕಿ ಸುಳಿವು ಇನ್ನೂ ಸಿಕ್ಕಿಲ್ಲ
Advertisement
ಸದ್ಯ ಘಟನೆ ಸಂಬಂಧ ಆರೋಪಿ ಪತ್ತೆಗಾಗಿ ಚಾಮರಾಜಪೇಟೆ ಪೊಲೀಸರು ಬಲೆ ಬೀಸಿದ್ದಾರೆ. ಇತ್ತ ಆಯುಬ್ ಖಾನ್ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆ ಬಳಿ ಪೊಲೀಸರಿಂದ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮೂರು ಡಿ.ಆರ್ ಪೊಲೀಸ್ ವಾಹನ ಸೇರಿದಂತೆ ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
Live Tv
[brid partner=56869869 player=32851 video=960834 autoplay=true]