ನವದೆಹಲಿ: ಅಕ್ರಮ ಬೆಟ್ಟಿಂಗ್ ಆ್ಯಪ್ (Illegal betting app) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ (Yuvraj Singh) ಇಂದು (ಸೆ.23) ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಇದು 1xBet ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದ್ದು, ಸೆ.16ರಂದು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರಿಗೆ ಇಡಿ ಸಮನ್ಸ್ ಜಾರಿಮಾಡಿತ್ತು. ಅದರಂತೆ ಯುವರಾಜ್ ಸಿಂಗ್ ಅವರು ತಮ್ಮ ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಇಡೀ ವಿಚಾರಣೆಗೆ ಹಾಜರಾದರು. ಈ ವೇಳೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಅಕ್ರಮ ಬೆಟ್ಟಿಂಗ್ ಆಪ್ ಕೇಸ್; ಇಡಿ ವಿಚಾರಣೆಗೆ ಹಾಜರಾದ ರಾಬಿನ್ ಉತ್ತಪ್ಪ
ಇದೇ ವೇಳೆ ಯುವರಾಜ್ ಸಿಂಗ್ ಜೊತೆಗೆ ಉದ್ಯಮಿ ಅನ್ವೇಶ್ ಜೈನ್ ಕೂಡ ಇದೇ ಪ್ರಕರಣ ಸಂಬಂಧ ಇಡಿ ವಿಚಾರಣೆಗೆ ಹಾಜರಾಗಿದ್ದರು. ಸೋಮವಾರ (ಸೆ.22) ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ಕೂಡ ಇಡಿ ವಿಚಾರಣೆಗೆ ಹಾಜರಾಗಿದ್ದರು.
ಇನ್ನೂ ಇದಕ್ಕೂ ಮೊದಲು ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಮಾಜಿ ಕ್ರಿಕೆಟಿಗ ಸುರೇಶ್ ರೈನಾ, ಶಿಖರ್ ಧವನ್, ನಟಿ ಅಂಜಲಿ ಅರೋರಾ, ನಟಿ ಮಿಮಿ ಚಕ್ರವರ್ತಿ ಹಾಗೂ ನಟ ಅಂಕುಶ್ ಹಜಾರ, ಪ್ರಕಾಶ್ ರಾಜ್, ವಿಜಯ ದೇವರಕೊಂಡ, ರಾಣಾ ದಗ್ಗುಬಾಟಿ, ಹರ್ಭಜನ್ ಸಿಂಗ್, ಊರ್ವಶಿ ರೌಟೇಲಾ ವಿಚಾರಣೆ ಎದುರಿಸಿದ್ದರು.
ಏನಿದು ಕೇಸ್?
ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ವಂಚನೆ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಬೆಟ್ಟಿಂಗ್ ಆ್ಯಪ್‌ಗಳಿಗೆ ಸಂಬಂಧಿಸಿದ ಹಲವಾರು ಪ್ರಕರಣಗಳ ತನಿಖೆ ನಡೆಸುತ್ತಿದೆ. ಈಗಾಗಲೇ ಬೆಟ್ಟಿಂಗ್ ಆ್ಯಪ್‌ಗಳ ಪ್ರಚಾರದಲ್ಲಿದ್ದ ಹಲವಾರು ಬಾಲಿವುಡ್ ಮತ್ತು ದಕ್ಷಿಣ ಭಾರತದ ಚಲನಚಿತ್ರ ತಾರೆಯರು, ಕ್ರಿಕೆಟಿಗರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ.ಇದನ್ನೂ ಓದಿ: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ – ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸೇರಿ ಮೂವರಿಗೆ ಇಡಿ ಸಮನ್ಸ್
 


 
		 
		 
		 
		 
		
 
		 
		 
		 
		