ನವದೆಹಲಿ: 2020ರ ದೆಹಲಿ ಗಲಭೆಗೆ ಸಂಬಂಧಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ (Former JNU Student) ಉಮರ್ ಖಾಲಿದ್‍ಗೆ (Umar Khalid) ಬಿಗ್ ರಿಲೀಫ್ ಸಿಕ್ಕಿದ್ದು, ದೆಹಲಿ ನ್ಯಾಯಾಲಯ (Delhi Court) ಖುಲಾಸೆಗೊಳಿಸಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಈ ತೀರ್ಪನ್ನು ನೀಡಿದ್ದಾರೆ. ಉಮರ್ ಖಾಲಿದ್ ಹಾಗೂ ಮತ್ತೋರ್ವ ಜೆಎನ್‍ಯು ಮಾಜಿ ವಿದ್ಯಾರ್ಥಿ ಹಾಗೂ ಯುನೈಟೆಡ್ ಅಗೈನ್ಸ್ಟ್‍ಹೇಟ್ ಸಂಸ್ಥಾಪಕ ಖಾಲಿದ್ ಸೈಫಿ ಎರಡು ವರ್ಷದ ಹಿಂದೆ ದೆಹಲಿಯ ಚಾಂದ್‍ಬಾಗ್‍ನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ (Stone-Throwing Case) ಭಾಗಿಯಾಗಿದ್ದಾರೆ ಎಂಬ ಆರೋಪದ ಮೇರೆಗೆ ಬಂಧಿಸಲಾಗಿತ್ತು.
Advertisement
Advertisement
ಈ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯ ಇಂದು ತೀರ್ಪು ನೀಡಿದ್ದು, ದೆಹಲಿಯ ಚಾಂದ್‍ಬಾಗ್‍ನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಖಾಲಿದ್ ಮತ್ತು ಸೈಫಿ ವಿರುದ್ಧ ಸಾಕ್ಷ್ಯಾಧಾರಗಳ ಕೊರೆತೆಯಿಂದಾಗಿ ಅವರನ್ನು ಖುಲಾಸೆಗೊಳಿಸಿದೆ. ಆದರೆ ದೆಹಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಉಮರ್ ಖಾಲಿದ್‍ಗೆ ಜಾಮೀನು ಸಿಕ್ಕಿದ್ದರೂ, ಬಿಡುಗಡೆ ಭಾಗ್ಯ ಇನ್ನು ದೊರೆತಿಲ್ಲ.
Advertisement
ಉಮರ್ ಖಲೀದ್ ಈಗಾಗಲೇ ದೆಹಲಿ ಕಲ್ಲು ತೂರಾಟ ಪ್ರಕರಣವೊಂದೇ ಅಲ್ಲದೇ ಭಯೋತ್ಪಾದನಾ ಚಟುವಟಿಕೆಯಲ್ಲೂ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದನ್ನೂ ಓದಿ: ಬಿಜೆಪಿ, ಆರ್‌ಎಸ್‍ಎಸ್ ವಿರುದ್ಧ ರಾಹುಲ್ ಸೀತಾ ಅಸ್ತ್ರ
Advertisement
2020ರ ಫೆಬ್ರವರಿ 20 ರಂದು ದೆಹಲಿಯಲ್ಲಿ ನಡೆದ ಕೋಮು ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್ ಬಂಧನವಾಗಿತ್ತು. ಪ್ರಕರಣದಲ್ಲಿ ಒಳಸಂಚು ಮಾಡಿರುವುದಾಗಿ ಆರೋಪಿಸಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಪ್ರಕರಣ ದಾಖಲಿಸಲಾಗಿತ್ತು. ಗಲಭೆ ವೇಳೆ 53 ಜನ ಮೃತಪಟ್ಟಿದ್ದು, 700 ಹೆಚ್ಚು ಜನರಿಗೆ ಗಾಯಗಳಾಗಿತ್ತು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ- ಮದುವೆಯಾಗಿ ಒಂದೂವರೆ ವರ್ಷಕ್ಕೆ ಗೃಹಿಣಿ ಆತ್ಮಹತ್ಯೆ