ಮಂಗಳೂರು: ಕರ್ಣಾಟಕ ಬ್ಯಾಂಕ್‌ನ (Karnataka Bank) ಮಾಜಿ ಅಧ್ಯಕ್ಷ ಪೊಳಲಿ ಜಯರಾಂ ಭಟ್ (P Jayaram Bhat) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಠಾತ್ ಹೃದಯಾಘಾತಕ್ಕೆ ಒಳಗಾದ ಜಯರಾಂ ಭಟ್ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು
ಜಯರಾಂ ಭಟ್ ಅವರು ಬ್ಯಾಂಕಿಂಗ್ ಕಾರ್ಯಾಚರಣೆಗಳ ಎಲ್ಲಾ ಅಂಶಗಳಲ್ಲಿ ಅಪಾರ ಅನುಭವ ಹೊಂದಿದ್ದರು. 2009ರ ಜುಲೈ 14 ರಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದರು. ಅನಂತಕೃಷ್ಣ ಅವರ ನಂತರ ಅರೆಕಾಲಿಕ ನಾನ್-ಎಕ್ಸಿಕ್ಯೂಟಿವ್ ಚೇರ್ಮನ್ ಆಗಿ ಅಧಿಕಾರ ವಹಿಸಿಕೊಂಡು ಸೇವೆ ಸಲ್ಲಿಸಿದ್ದರು. ರಸಾಯನಶಾಸ್ತ್ರದಲ್ಲಿ ಎಂಎಸ್ಸಿ ಪದವಿ ಪಡೆದಿದ್ದ ಭಟ್ ಅವರು ಬ್ಯಾಂಕಿಂಗ್ ಕ್ಷೇತ್ರಕ್ಕೆ ಬಂದು ಅಚ್ಚರಿ ಮೂಡಿಸುವಂತೆ ಸಾಧನೆ ಮಾಡಿದರು.
1973 ರಲ್ಲಿ ಕರ್ನಾಟಕ ಬ್ಯಾಂಕ್ ಲಿಮಿಟೆಡ್‌ನಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಬದುಕು ಆರಂಭಿಸಿದರು. ನಂತರ 1993 ರಲ್ಲಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮುಖ್ಯ ಅಕೌಂಟೆಂಟ್ ಕೆಲಸ ಮಾಡಿದರು. 14 ವರ್ಷಗಳ ಕಾಲ ಶಾಖಾ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದರು. ಸಹಾಯಕ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಅಂತಿಮವಾಗಿ ಮುಖ್ಯ ಜನರಲ್ ಮ್ಯಾನೇಜರ್ ಆಗಿ ಬಡ್ತಿ ಪಡೆದು ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ: ಮತ ಬ್ಯಾಂಕಿಗೆ ಸಿದ್ದರಾಮಯ್ಯ ಸರ್ಕಾರ ಬೊಕ್ಕಸವನ್ನು ಲೂಟಿ ಮಾಡಿ ರೈತರ ನಾಶಕ್ಕೆ ಮುಂದಾಗುತ್ತಿದೆ: ಸಿ.ಟಿ.ರವಿ
Web Stories