ಚೆನ್ನೈ: ಮಾಲ್ಡೀವ್ಸ್‍ನ ಮಾಜಿ ಉಪಾಧ್ಯಕ್ಷ ಅಹ್ಮದ್ ಆದೀಬ್ ಅಬ್ದುಲ್ ಗಫೂರ್ ಅವರನ್ನು ಅಕ್ರಮವಾಗಿ ದೇಶವನ್ನು ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಭಾರತೀಯ ಗುಪ್ತಚರ ಇಲಾಖೆ (ಐಬಿ) ಅಧಿಕಾರಿಗಳು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ಬಂಧಿಸಿದ್ದಾರೆ.
ಅಹ್ಮದ್ ಆದೀಬ್ ಅಬ್ದುಲ್ ಗಫೂರ್ ಅವರು ಒಂದು ಬೋಟಿನಲ್ಲಿ ಅ ಬೋಟಿನ ಸಿಬ್ಬಂದಿಯಂತೆ ನಟಿಸಿ ಭಾರತಕ್ಕೆ ಅಕ್ರಮವಾಗಿ ಪ್ರವೇಶ ಮಾಡಲು ಯತ್ನಿಸಿದಾಗ ಅವರನ್ನು ಗುಪ್ತಚಾರ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.
Advertisement
Advertisement
ಈ ವಿಚಾರವಾಗಿ ಮಾತನಾಡಿರುವ ಗುಪ್ತಚರ ಇಲಾಖೆ ಅಧಿಕಾರಿಗಳು ಅವರು ಬಳಿ ಯಾವುದೇ ಪಾಸ್ ಪೋರ್ಟ್ ಇರಲಿಲ್ಲ ಮತ್ತು ಅವರು ಮಾಲ್ಡೀವ್ಸ್ ನ ರಾಜಕಾರಣಿಯಾಗಿ ಏಕೆ ಭಾರತಕ್ಕೆ ಅನಧಿಕೃತವಾಗಿ ಪ್ರವೇಶ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ನಾವು ತನಿಖೆ ಮಾಡುತ್ತಿದ್ದೇವೆ. ಮಾಲ್ಡೀವ್ಸ್ ನ ಮಾಜಿ ಉಪಾಧ್ಯಕ್ಷರಾಗಿರುವ ಕಾರಣ ಅವರನ್ನು ಬಂಧಿಸಿರುವ ಮಾಹಿತಿಯನ್ನು ಭಾರತೀಯ ವಿದೇಶಾಂಗ ಸಚಿವಾಲಯಕ್ಕೆ ವರದಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
Advertisement
ಈ ಕುರಿತು ಮಾತನಾಡಿದ ವಿದೇಶಾಂಗ ಇಲಾಖೆಯ ವಕ್ತಾರ ರವೀಶ್ ಕುಮಾರ್, ನಾವು ನಮಗೆ ಸಿಕ್ಕಿರುವ ವರದಿಗಳ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ. ಇದರ ಜೊತೆಗೆ ನಾವು ಮಾಲ್ಡೀವ್ಸ್ ಸರ್ಕಾರವನ್ನು ಸಂಪರ್ಕಿಸಿ ಈ ವರದಿಗಳು ನಿಜವೇ ಎಂದು ತಿಳಿಯಲು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.
Advertisement
ಅಹ್ಮದ್ ಆದೀಬ್ ಅಬ್ದುಲ್ ಗಫೂರ್ ವಿರುದ್ಧ ಮಾಲ್ಡೀವ್ಸ್ ನ್ಯಾಯಾಲಯಗಳಲ್ಲಿ ಹಲವಾರು ಪ್ರಕರಣಗಳು ಇದ್ದು, ಅಲ್ಲಿನ ಸರ್ಕಾರ ಅವರ ಪಾಸ್ ಪೋರ್ಟ್ ರದ್ದು ಮಾಡಿದೆ. ಹೀಗಾಗಿ ದೇಶ ಬಿಟ್ಟು ಭಾರತಕ್ಕೆ ಬೋಟ್ ಮೂಲಕ ಅನಧಿಕೃತವಾಗಿ ಪ್ರವೇಶ ಮಾಡಲು ಯತ್ನಿಸಿದ್ದರು ಎಂದು ವರದಿಯಾಗಿದೆ.
ಅಬ್ದುಲ್ ಗಫೂರ್ ಮಾಲ್ಡೀವ್ಸ್ ಮಾರ್ಕೆಟಿಂಗ್ ಮತ್ತು ಪಬ್ಲಿಕ್ ರಿಲೇಶನ್ಸ್ ಕಾರ್ಪೊರೇಷನ್ (ಎಮ್.ಎಂ.ಪಿ.ಆರ್.ಸಿ) ಗೆ ಸಂಬಂಧಿಸಿದ ಪ್ರಕರಣವೂ ಸೇರಿದಂತೆ ಅನೇಕ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಈ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಗಫೂರ್ ಅವರನ್ನು ಮಾಲ್ಡೀವ್ಸ್ ನ ಭ್ರಷ್ಟಾಚಾರ ನಿಗ್ರಹ ದಳ (ಎಸಿಸಿ) ಬುಧವಾರ ವಿಚಾರಣೆಗೆ ಕರೆದಿತ್ತು. ಆದರೆ ಅವರು ತಪ್ಪಿಸಿಕೊಂಡು ಭಾರತಕ್ಕೆ ಬಂದಿದ್ದಾರೆ.