ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಮವಾರ ಮಧ್ಯರಾತ್ರಿ ಎದೆನೋವು ಮತ್ತು ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವರನ್ನು ಶೇಷಾದ್ರಿಪುರಂ ಬಳಿಯಿರುವ ಅಪೋಲೋ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.
Advertisement
ಕಳೆದ ಹತ್ತು ದಿನದ ಹಿಂದೆಯಷ್ಟೇ ಡಿಕೆಶಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಿಪಿ ಶುಗರ್ ಪರೀಕ್ಷೆಗೆ ಎಂದು ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಮತ್ತೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದಾರೆ.
Advertisement
Advertisement
ದೆಹಲಿಯ ತಿಹಾರ್ ಜೈಲಿನಲ್ಲಿ 48 ದಿನಗಳಿದ್ದ ಡಿ.ಕೆ ಶಿವಕುಮಾರ್ ಅವರು ಅಕ್ಟೋಬರ್ 23ರಂದು ಜಾಮೀನಿನ ಮೇಲೆ ಹೊರ ಬಂದಿದ್ದರು. ತಿಹಾರ್ ಜೈಲಿನಲ್ಲಿದ್ದಾಗ ಅನಾರೋಗ್ಯ ಸಮಸ್ಯೆ ಎದುರಿಸಿದ್ದ ಮಾಜಿ ಸಚಿವರಿಗೆ ಆರ್ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಜಾಮೀನು ಪಡೆದು ಅಕ್ಟೋಬರ್ 26ರಂದು ಬೆಂಗಳೂರಿಗೆ ಆಗಮಿಸಿದ್ದ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು. ಬೆಂಗಳೂರಿಗೆ ಆಗಮಿಸಿದ ದಿನವೇ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಬಳಿಕ ಅವರು ರಾಜ್ಯದ ವಿವಿಧ ಮಠಗಳಿಗೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದಿದ್ದರು.