ಚಿಕ್ಕಬಳ್ಳಾಪುರ: ತಿಹಾರ್ ಜೈಲಿನಿಂದ ಹೊರಬಂದ ಬಳಿಕ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಈಗ ಟೆಂಪಲ್ ರನ್ ಮಾಡುತ್ತಿದ್ದಾರೆ.
ಇಂದು ತಮ್ಮ ಸಂಬಂಧಿಕರ ಮದುವೆ ಸಮಾರಂಭದ ಪ್ರಯುಕ್ತ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿರುವ ಐತಿಹಾಸ ಪ್ರಸಿದ್ಧ ಶ್ರೀ ಭೋಗನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ನಂತರ ನೂತನ ವಧುವರರಿಗೆ ಡಿಕೆಶಿ ಆಶೀರ್ವಾದ ಮಾಡಿದರು.
ಡಿ.ಕೆ ಶಿವಕುಮಾರ್ ಆಗಮಿಸಿದ ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಎಂ. ಆಂಜನಪ್ಪ, ಕಾಂಗ್ರೆಸ್ ಮುಖಂಡ ಯಲುವಳ್ಳಿ ರಮೇಶ ಸೇರಿದಂತೆ ಕೆಲವು ಕಾರ್ಯಕರ್ತರು ದೇವಸ್ಥಾನಕ್ಕೆ ಆಗಮಿಸಿ ಮಾಜಿ ಸಚಿವರ ಜೊತೆ ಕುಶಲೋಪಚಾರ ನಡೆಸಿದ ಪ್ರಸಂಗವೂ ನಡೆಯಿತು.
ಇದೇ ವೇಳೆ ಚಿಕ್ಕಬಳ್ಳಾಪುರ ಉಪಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಎಂ. ಆಂಜನಪ್ಪ ಹಾಗೂ ಮುಖಂಡರ ಜೊತೆ ದೇವಾಲಯ ಆವರಣದಲ್ಲಿ ಡಿಕೆ ಶಿವಕುಮಾರ್ ಚರ್ಚಿಸಿ, ನಾವು ನಿಮ್ಮ ಜೊತೆ ಇದ್ದೇವೆ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು. ಇದು ಖಾಸಗಿ ಭೇಟಿಯಾಗಿದ್ದು ಮುಂದೆ ರಾಜಕೀಯ ಮಾತಾಡ್ತೀನಿ ಅಂತ ರಾಜಕೀಯ ಪ್ರಶ್ನೆಗಳಿಗೆ ಉತ್ತರಿಸಲು ಡಿಕೆಶಿ ನಿರಾಕರಿಸಿದರು.