ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾಗಿ ನಗರದ ಶೇಷಾದ್ರಿಪುರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಡಿಸ್ಚಾರ್ಜ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ನಿಮ್ಮೆಲ್ಲರ ಆಶೀರ್ವಾದದಿಂದ ಚೆನ್ನಾಗಿ ಇದ್ದೀನಿ. ವೈದ್ಯರು ಒಂದು ವಾರ ರೆಸ್ಟ್ ತೆಗೆದುಕೊಳ್ಳಲು ಹೇಳಿದ್ದಾರೆ. ನನಗೆ ರೆಸ್ಟ್ ಬೇಕಿದೆ, ನಾನು ಏನೂ ಮಾತಾಡಲ್ಲ ಎಂದು ಹೇಳಿದ್ದಾರೆ.
Advertisement
Advertisement
2 ದಿನಗಳಿಂದ ಅಪೋಲೋ ಆಸ್ಪತ್ರೆಯಲ್ಲಿದ್ದ ಡಿಕೆಶಿ, ರಕ್ತ ಪರೀಕ್ಷೆಯಲ್ಲಿ ಯಾವುದೇ ಸೋಂಕು ತಗುಲಿಲ್ಲ ಎಂದು ದೃಢವಾಗುತ್ತಿದ್ದಂತೆಯೇ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
ದೆಹಲಿಯ ತಿಹಾರ್ ಜೈಲಿನಲ್ಲಿ 48 ದಿನಗಳಿದ್ದ ಡಿ.ಕೆ ಶಿವಕುಮಾರ್ ಅವರು ಅಕ್ಟೋಬರ್ 23ರಂದು ಜಾಮೀನಿನ ಮೇಲೆ ಹೊರ ಬಂದಿದ್ದರು. ತಿಹಾರ್ ಜೈಲಿನಲ್ಲಿದ್ದಾಗ ಅನಾರೋಗ್ಯ ಸಮಸ್ಯೆ ಎದುರಿಸಿದ್ದ ಮಾಜಿ ಸಚಿವರಿಗೆ ದೆಹಲಿಯ ಆರ್‌ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಜಾಮೀನು ಪಡೆದು ಅಕ್ಟೋಬರ್ 26ರಂದು ಬೆಂಗಳೂರಿಗೆ ಆಗಮಿಸಿದ್ದ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು.
Advertisement
ಬೆಂಗಳೂರಿಗೆ ಆಗಮಿಸಿದ ಡಿ.ಕೆ ಶಿವಕುಮಾರ್ ರಾಜ್ಯದ ವಿವಿಧ ಮಠಗಳಿಗೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದಿದ್ದರು. ಬೆಂಗಳೂರಿಗೆ ಆಗಮಿಸಿದ ದಿನವೇ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಆದರೆ ಶುಕ್ರವಾರ ಸಂಜೆ ಬಿಪಿ, ಶುಗರ್ ಪರೀಕ್ಷೆಗೆಂದು ಅಪೋಲೋ ಆಸ್ಪತ್ರೆಗೆ ಲಗೇಜ್ ಸಮೇತ ತೆರಳಿದ್ದರು. ಪರೀಕ್ಷೆ ನಡೆಸಿದ ವೈದ್ಯರು ಮಾಜಿ ಸಚಿವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡುತ್ತಿದ್ದರು.