ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್ ಅವಕಾಶ ನೀಡಿದೆ.
ಇಂದಿನಿಂದ ಎರಡು ವಾರಗಳ ಕಾಲ ಬಳ್ಳಾರಿಯಲ್ಲಿ ಇರಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಜನಾರ್ದನ ರೆಡ್ಡಿ ಪತ್ನಿ ಅರುಣಾ ಅವರ ತಂದೆ ಪಾಶ್ರ್ವವಾಯ ಸಮಸ್ಯೆಯಿಂದ ಬಳಲುತ್ತಿದ್ದು, ಆರೋಗ್ಯ ವಿಚಾರಣೆಗೆ ತೆರಳಬೇಕಿತ್ತು. ಈ ಹಿನ್ನೆಲೆಯಲ್ಲಿ ಬಳ್ಳಾರಿಗೆ ತೆರಳಲು ಅನುಮತಿ ನೀಡುವಂತೆ ರೆಡ್ಡಿ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದ್ದರು.
Advertisement
Advertisement
ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಜೆ ಕಾಲದ ಪೀಠ ಷರತ್ತುಬದ್ಧ ಒಪ್ಪಿಗೆ ಸೂಚಿಸಿದೆ. ವಿಚಾರಣೆ ವೇಳೆ ಸಿಬಿಐ ಅಧಿಕಾರಿಗಳನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗದುಕೊಂಡಿದೆ. ಪ್ರಕರಣದ ಸಂಬಂಧ ಆರು ವರ್ಷವಾದರೂ ಯಾಕೆ ಚಾರ್ಜ್ ಶೀಟ್ ಸಲ್ಲಿಸಿಲ್ಲ ಎಂದು ಕ್ಲಾಸ್ ತೆಗೆದುಕೊಂಡಿದೆ. ಈ ಸಂಬಂಧ ಸುಪ್ರೀಂಕೋರ್ಟ್ ಸ್ಪಷ್ಟನೆ ನೀಡುವಂತೆ ಕೊರ್ಟ್ ಸಿಬಿಐಗೆ ಸೂಚಿಸಿದೆ.
Advertisement
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರೆಡ್ಡಿಗೆ ಯಾವುದೇ ಕಾರಣಕ್ಕೂ ಬಳ್ಳಾರಿ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ ಎಂದು ಕೋರ್ಟ್ ಆದೇಶಿಸಿತ್ತು. 2016ರ ನವೆಂಬರ್ 6ರಂದು ಮಗಳ ಮದುವೆಯ ಹಿನ್ನೆಲೆಯಲ್ಲಿ ಬಳ್ಳಾರಿಗೆ ಒಂದು ವಾರದ ಮಟ್ಟಿಗೆ ತೆರಳಲು ಸುಪ್ರೀಂಕೋರ್ಟ್ ವಿಶೇಷ ಅನುಮತಿ ನೀಡಿತ್ತು.