ಬೆಂಗಳೂರು: No Change In My Stand, ನಾನು ಯಾವಾಗಲೂ ಸಿದ್ಧರಾಮಯ್ಯ ಪರವೇ. ಡಿಕೆ ಶಿವಕುಮಾರ್ ಏನೇ ಪ್ರಯತ್ನ ಮಾಡಿದ್ರೂ ನನ್ನ ಸ್ಟ್ಯಾಂಡ್ ಬದಲಾಗಲ್ಲ. ಹಿಂದೆ ನೀಡಿದ್ದ ಹೇಳಿಕೆಗಳಿಗೆ ಈಗಲೂ ಬದ್ಧ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ (KN Rajanna) ತಿಳಿಸಿದ್ದಾರೆ.
ಡಿಸಿಎಂ ಡಿಕೆಶಿ (DK Shivakumar) ಭೇಟಿ ವಿಚಾರಕ್ಕೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದಕ್ಕೂ ರಾಜಿ ಆಗಲ್ಲ, ಹಿಂದೆ ಆಡಿದ ಮಾತಿಗೆ ಈಗಲೂ ಬದ್ಧ. ನಾನು ಯಾವಾಗಲೂ ಸಿದ್ದರಾಮಯ್ಯ (siddarmaiah) ಪರವೇ ಅಂತ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಜೊತೆ ರಾಜಣ್ಣ ಮಾತುಕತೆ – ಕುತೂಹಲ ಮೂಡಿಸಿದ ನಾಯಕರ ಭೇಟಿ
ಡಿಕೆ ಶಿವಕುಮಾರ್ ನಿನ್ನೆ ಭೇಟಿ ಮಾಡಿದ್ದರು. ಅವರೇನು ಹುಡಿಕಿಕೊಂಡು ಬಂದಿರಲಿಲ್ಲ. ಅವರು ಪಾರ್ಟಿ ಅಧ್ಯಕ್ಷರು ಮಾತಾಡ್ತಾರೆ. ಯಾರನ್ನೂ ಬೇಕಾದ್ರು ಮಾತಾಡಿಸಬಹುದು. ಪಕ್ಷ ಸಂಘಟನೆ ವಿಚಾರವಾಗಿ ಭೇಟಿ ಮಾಡಿದ್ದರು. ಪಕ್ಷ ಸಂಘಟನೆ ಮಾಡೋಣ ಅಂದರು, ನಾನು ಆಯ್ತು ಅಂದೆ. ಅದರ ಹೊರತಾಗಿ ಬೇರೆ ಯಾವುದೇ ವಿಚಾರಗಳು ಚರ್ಚೆ ಆಗಿಲ್ಲ ಅಂತ ಹೇಳಿದ್ದಾರೆ.
ನಮ್ಮ ಸ್ಟ್ಯಾಂಡ್ ಸಿದ್ದರಾಮಯ್ಯ ಪರವಾಗಿಯೇ ಇದೆ. ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಮನೆಗೆ ಎಲ್ಲರೂ ಊಟಕ್ಕೆ ಹೋಗಿದ್ದರು. ಅದು ರಾಜಕೀಯ ಅಲ್ಲ. ಅದೊಂದು ಸೌಜನ್ಯಕ್ಕೆ ಅಷ್ಟೆ. ಸಿಎಂ ವಿಚಾರವನ್ನ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಸಿಎಂ ಕೂಡ ನಾನೇ 5 ವರ್ಷ ಇರ್ತೀನಿ ಅಂತ ಪದೇ ಪದೇ ಹೇಳಿದ್ದಾರೆ. ಹೈಕಮಾಂಡ್ ಹೇಳೋವರೆಗೆ ನಾನು ಕಾಯ್ತೀನಿ ಎಂದು ತಿಳಿಸಿದ್ದಾರೆ.
ನಾನು ಹಿಂದೆ ಹೇಳಿದ ಎಲ್ಲಾ ಹೇಳಿಕೆಗೆ ಬದ್ಧ. ನಾನು ಸಿದ್ದರಾಮಯ್ಯ ಪರವೇ, No Change In My Stand. ಡಿ.ಕೆ ಶಿವಕುಮಾರ್ ಏನೇ ಪ್ರಯತ್ನ ಮಾಡಿದ್ರು ಕೂಡ ನನ್ನ ಹಿಂದಿನ ಎಲ್ಲ ಹೇಳಿಕೆಗಳಿಗೆ ನಾನು ಬದ್ಧ ಎಂದಿದ್ದಾರೆ. ಇದನ್ನೂ ಓದಿ: ನಿರ್ಬಂಧದ ನಡುವೆಯೂ ಕೋಳಿ ಅಂಕ; ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಕೇಸ್


