ಶಿವಮೊಗ್ಗ: ರೈತರ ದ್ರೋಹಿ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ (Siddaramaiah) ಮಾತ್ರ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಕಿಡಿ ಕಾರಿದ್ದಾರೆ.
ಶಿವಮೊಗ್ಗದಲ್ಲಿಂದು (Shivamogga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ (Government) ಬಂದು ಇನ್ನೂ ಮೂರು ತಿಂಗಳೂ ಆಗಿಲ್ಲ. ಆಗಲೇ ಕೃಷಿ ಕಾಯ್ದೆ ಹಿಂಪಡೆಯುವ ಮೂಲಕ ರೈತರಿಗೆ (Farmers) ತೊಂದರೆ ಕೊಡುತ್ತಿದ್ದಾರೆ. ಯಡಿಯೂರಪ್ಪ ಅವರು ರೈತರಿಗೆ ಕೊಟ್ಟ ಹಣವನ್ನು ವಾಪಸ್ ಪಡೆಯುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ಮೀಸಲಿಟ್ಟ ಬೇರೆ ಬೇರೆ ಯೋಜನೆಗಳ ಹಣ ಬಳಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳು ರೈತರ ದ್ರೋಹಿ ಆಗಿದ್ದಾರೆ. ರೈತರ ದ್ರೋಹಿ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ ಎಂದು ವಾಗ್ದಾಳಿ ನಡೆಸಿದ್ದಾರೆ.
Advertisement
Advertisement
ಅಲ್ಲದೇ ರಾಜ್ಯದ ಇತಿಹಾಸಲ್ಲಿ ಇದೇ ಮೊದಲ ಬಾರಿಗೆ ಅಧಿಕಾರಿಗಳು ಸಚಿವರೊಬ್ಬರ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದು, ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಮುಖ್ಯಮಂತ್ರಿಗಳು ತಕ್ಷಣವೇ ಆರೋಪ ಕೇಳಿಬಂದಿರುವ ಸಚಿವರನ್ನ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹರಿಯಾಣದಲ್ಲಿ ಕೋಮು ಸಂಘರ್ಷ: 3 ಜಿಲ್ಲೆಯ 14 ಹಳ್ಳಿಗಳಲ್ಲಿ ಮುಸ್ಲಿಮರಿಗೆ ಬಹಿಷ್ಕಾರ – ಜಿಲ್ಲಾಡಳಿತಕ್ಕೆ ಬಹಿರಂಗ ಪತ್ರ
Advertisement
Advertisement
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರ ಸಮಸ್ಯೆ ಬಗೆಹರಿಸುವುದಿರಲಿ, ಅವರ ಶಾಸಕರ ಸಮಸ್ಯೆ ಬಗೆಹರಿಸಲು ಆಗುತ್ತಿಲ್ಲ. ಮುಖ್ಯಮಂತ್ರಿಗಳು ತೇಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ನೀವು ಏನಾದರೂ ಮಾಡಿ ಮೊದಲು ಜನರ ಸಮಸ್ಯೆ ಬಗ್ಗೆ ಗಮನ ಕೊಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಮ್ಮ ಸಿಂಹ ರಾಹುಲ್ ಗಾಂಧಿ ಗೆದ್ದಿದ್ದಾರೆ – ಸಂಸತ್ ಸದಸ್ಯತ್ವ ಅನರ್ಹತೆ ವಾಪಸ್ ಬೆನ್ನಲ್ಲೇ ಸಿಹಿ ಹಂಚಿ INDIA ಒಕ್ಕೂಟ ಸಂಭ್ರಮ
Web Stories