ನವದೆಹಲಿ: ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ಬಂಡಾಯದ ಬಾವುಟ ಹಾರಿಸಿರುವ ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಹೈಕಮಾಂಡ್ ಭೇಟಿಗೆ ದೆಹಲಿ ತಲುಪಿದ್ದಾರೆ.
ಶುಕ್ರವಾರ ರಾತ್ರಿ ದೆಹಲಿಗೆ ತಲುಪಿರುವ ಎಂ.ಬಿ ಪಾಟೀಲ್ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ. ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ತಮ್ಮನ್ನು ಪರಿಗಣಿಸದ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಎಂಬಿ ಪಾಟೀಲ್ ಅಸಮಧಾನ ವ್ಯಕ್ತಪಡಿಸಿದ್ರು. ಇದ್ನನೂ ಓದಿ; ಜೆಡಿಎಸ್‍ನಲ್ಲೂ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಫೋಟ
Advertisement
Advertisement
ಅಲ್ಲದೇ ಇಪ್ಪತ್ತು ಮಂದಿ ಶಾಸಕರೊಂದಿಗೆ ಸೇರಿ ಮೈತ್ರಿ ಸರ್ಕಾರವನ್ನೇ ಬುಡಮೇಲು ಮಾಡಲು ಸಿದ್ಧತೆ ನಡೆಸಿದ್ರು. ಇದನ್ನ ಅರಿತ ರಾಹುಲ್ ಗಾಂಧಿ ದೆಹಲಿಗೆ ಬಂದು ಭೇಟಿಯಾಗುವಂತೆ ಎಂ.ಬಿ ಪಾಟೀಲ್‍ಗೆ ಬುಲಾವ್ ನೀಡಿದ್ರು. ಹೀಗಾಗಿ ಇಂದು ಎಂಬಿ ಪಾಟೀಲ್ ಸೇರಿದಂತೆ ಹಲವು ಬಂಡಾಯ ಶಾಸಕರು ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ. ಇದನ್ನೂ ಓದಿ: ಎಂಬಿ ಪಾಟೀಲ್ ಬಣದಲ್ಲಿರೋ 19 ಶಾಸಕರು ಯಾರು? ಇಲ್ಲಿದೆ ಪಟ್ಟಿ
Advertisement
ರಾಜ್ಯ ಚುನಾವಣಾ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಕೇರಳದಲ್ಲಿದ್ದು, ಮಧ್ಯಾಹ್ನದ ವೇಳೆಗೆ ದೆಹಲಿ ತಲುಪುವ ಸಾಧ್ಯತೆ ಇದೆ. ಜೊತೆಗೆ ಡಿಸಿಎಂ ಪರಮೇಶ್ವರ್ ಇಂದಿನ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಇನ್ನು, ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ ಗುಂಡೂರಾವ್‍ಗೂ ರಾಹುಲ್ ಬುಲಾವ್ ನೀಡಿದ್ದು, ಅವರು ಸಹ ನಿನ್ನೆಯೇ ದೆಹಲಿ ತಲುಪಿದ್ದಾರೆ. ಅಂದಹಾಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಹೆಸರು ಚಲಾವಣೆಯಲ್ಲಿತ್ತು. ಈ ಮಧ್ಯೆ ಇವತ್ತಿನ ಸಭೆಗೆ ದಿನೇಶ್ ಗುಂಡೂರಾವ್ ಅವರನ್ನ ಕರೆಸಿದ್ದು, ಕೆಪಿಸಿಸಿ ಪಟ್ಟವನ್ನು ಎಂ.ಬಿ ಪಾಟೀಲ್‍ಗೆ ವಹಿಸಲಿದ್ಯಾ ಅನ್ನೋ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಡಿಕೆಶಿಗೆ ಜಲಸಂಪನ್ಮೂಲ, ರೇವಣ್ಣಗೆ PWD: ಯಾರಿಗೆ ಯಾವ ಖಾತೆ? ಇಲ್ಲಿದೆ ಪಟ್ಟಿ