ಯಾದಗಿರಿ: ರಾಜ್ಯ ರ್ಕಾರದ ರೈತ ವಿರೋಧಿ ನೀತಿ ಹಾಗೂ ಬಿಜೆಪಿ ಮುಖಂಡರ ಮೇಲೆ ಹಾಕಿರುವ ಸುಳ್ಳು ಕೇಸ್ ರದ್ದು ಪಡಿಸಬೇಕೆಂದು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹುಣಸಗಿ ಪಟ್ಟಣದಲ್ಲಿ ಮಾಜಿ ಸಚಿವ ರಾಜೂಗೌಡ (Raju Gowda) ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿವರಗೆ ಮಾಜಿ ಸಚಿವ ರಾಜೂ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ಹುಣಸಗಿ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾಜಿ ಸಚಿವರು ಮಾತನಾಡಿ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಲ್ಲಿ ನೀರು ಇದ್ದರೂ ಸರ್ಕಾರ ಅವೈಜ್ಞಾನಿಕ ವಾರಬಂದಿ ಜಾರಿಗೆ ತಂದಿದ್ದಾರೆ. ಅವೈಜ್ಞಾನಿಕ ವಾರಬಂದಿ ಪದ್ಧತಿ ರದ್ದು ಮಾಡಿ ರೈತರ ಹಿತ ಕಾಪಾಡಬೇಕೆಂದರು. ಸುರಪುರ ಭಾಗದ ಶಾಸಕ ಹಾಗೂ ಈ ಭಾಗದ ಜನಪ್ರತಿನಿಧಿಗಳು ಈ ಬಗ್ಗೆ ನೀರು ಹರಿಸುವ ಕೆಲಸ ಮಾಡುತ್ತಿಲ್ಲ. ಶಾಸಕರು ಟೇಬಲ್ ಗುದ್ದಿ ನೀರು ಬಿಡಿಸಬೇಕೆಂದರು.
Advertisement
Advertisement
ವಿದ್ಯುತ್ ಕೊರತೆಯಿಂದ ರೈತರ ಜಮೀನಿಗೆ ನೀರು ಹರಿಸಿಕೊಳ್ಳಲು ರೈತರಿಗೆ ಸಾಧ್ಯವಾಗುತ್ತಿಲ್ಲ ಐಪಿಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಿ ರೈತರ ಬೆಳೆ ಬೆಳೆಯಲು ಅನುಕೂಲ ಮಾಡಬೇಕೆಂದರು. ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಲಾಗಿದ್ದು .ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ತಪ್ಪು ಮಾಡಿದ್ದಾರೆ. ರಾಜಕೀಯ ದ್ವೇಷಕ್ಕೆ ಸುಳ್ಳು ಕೇಸ್ ಹಾಕಲಾಗಿದೆ.ತಪ್ಪಿತಸ್ಥ ಪಿಎಸ್ ಐ ಅವರನ್ನು ಅಮಾನತು ಮಾಡಬೇಕೆಂದು ರಾಜುಗೌಡ ಒತ್ತಾಯ ಮಾಡಿದ್ದಾರೆ. ನ್ಯಾಯಕ್ಕಾಗಿ ನಾವು ರಾಜ್ಯಪಾಲರ ಹತ್ತಿರ ಹೋಗುತ್ತೆವೆ. ಇಂದಿನ ಪ್ರತಿಭಟನೆ ಟ್ರೈಲರ್ ಇದ್ದು ಇನ್ನೂ ಮುಂದೆ ಪಿಕ್ಚರ್ ಬಾಕಿ ಇದೆ.ವಾರ ಬಂದಿ ರದ್ದು ಮಾಡದಿದ್ದರೆ ಬೃಹತ್ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವಿಧಾನಸಭೆಯೊಳಗೆ ಮಾತ್ರ ಗಲಾಟೆ, ಹೊರಗಡೆ ಎಲ್ಲರೂ ಸ್ನೇಹಿತರೇ ಆಗಿರ್ತಾರೆ: ಯು.ಟಿ. ಖಾದರ್
Advertisement
Advertisement
ಈ ವೇಳೆ ಬಿಜೆಪಿ ಮುಖಂಡ ಬಬ್ಲುಗೌಡ ಅವರು ಮಾತನಾಡಿ, ಸರಕಾರ ರೈತರಿಗೆ ಮೋಸ ಮಾಡುವ ಕೆಲಸ ಮಾಡಿದೆ.ರಾಜಕೀಯ ಲಾಭಕ್ಕಾಗಿ ರೈತರ ಜತೆ ಚಲ್ಲಾಟವಾಡಬೇಡಿ ವಾರಬಂದಿ ರದ್ದು ಮಾಡಬೇಕು. ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸ್ ಅಧಿಕಾರಿಗಳು ಅಧಿಕಾರ ದುರುಪಯೋಗ ಪಡಿಸಿಕೊಂಡು ಸುಳ್ಳು ಕೇಸ್ ಹಾಕಿದ್ದ ರದ್ದು ಮಾಡಬೇಕೆಂದು ಆಗ್ರಹಿಸಿದ್ರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಸುರೇಶ್ ಸಜ್ಜನ್, ಎಚ್.ಸಿ.ಪಾಟೀಲ್ ಸ್ಥಾವರಮಠ, ಕೃಷ್ಣಾ ಮುದನೂರು, ರಂಗಣ್ಣಗೌಡ ದೇವಿಕೇರಿ, ವೆಂಕಟೇಶ ಸಾಹುಕಾರ, ರಾಜಾ ಹಣಮಪ್ಪ ನಾಯಕ ತಾತಾ, ವಿರೇಶ್ ಚಿಂಚೋಳಿ, ಗದ್ದೆಪ್ಪ ಪೂಜಾರಿ ಸೇರಿದಂತೆ ಅನೇಕರು ಇದ್ದರು.
Web Stories