ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋತರೂ ನಾವು ನೈತಿಕವಾಗಿ ಗೆದ್ದಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ (Ramanatha Rai) ಹೇಳಿದ್ದಾರೆ.
ಚುನಾವಣಾ ಫಲಿತಾಂಶದ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನೈತಿಕವಾಗಿ ಸೋತಿದ್ದಾರೆ. ಚಾರ್ ಸೊ ಪಾರ್ ಅನ್ನುತ್ತಿದ್ದವರು ಈಗ ಅಧಿಕಾರ ಉಳಿಸಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ ಎಂದರು.
ಬೇರೆ ಬೇರೆ ರೀತಿಯಲ್ಲಿ ನಮ್ಮ ಒಕ್ಕೂಟವನ್ನ ಸೋಲಿಸುವ ಕೆಲಸ ಮಾಡಿದ್ದಾರೆ. ಇಡಿ, ಐಟಿ ಬಳಸಿ ನಮ್ಮ ಬ್ಯಾಂಕ್ ಖಾತೆ, ಹಣವನ್ನ ಫ್ರೀಜ್ ಮಾಡುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಲೋಕಸಭಾ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಎನ್‌ಡಿಎ 293, ಇಂಡಿಯಾ ಒಕ್ಕೂಟ 232 ಮತ್ತು ಇತರರು 18 ಸ್ಥಾನಗಳನ್ನು ಗೆದ್ದಿದ್ದಾರೆ. ಬಹುಮತಕ್ಕೆ 272 ಸದಸ್ಯರ ಅಗತ್ಯವಿದೆ.