Connect with us

Belgaum

ಆಸ್ಪತ್ರೆಯಿಂದ ರಮೇಶ್ ಜಾರಕಿಹೊಳಿ ಡಿಸ್ಚಾರ್ಜ್

Published

on

ಬೆಳಗಾವಿ: ಅತ್ಯಾಚಾರ ಪ್ರಕರಣ ಆರೋಪಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಏಪ್ರಿಲ್ 4ರಂದು ರಾತ್ರಿ 10.30ಕ್ಕೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಜಾರಕಿಹೊಳಿ ಗೋಕಾಕ್ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಏಪ್ರಿಲ್ 1ರಂದು ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಧೃಡವಾಗಿತ್ತು. ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದೀಗ ಬಿಪಿ, ಶುಗರ್ ಕಂಟ್ರೋಲ್ ಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಹೇಳಿದ್ದಾರೆ. ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿರುವ ರಮೇಶ್ ಜಾರಕಿಹೊಳಿ, ಮನೆಯಲ್ಲೇ ಕ್ವಾರೆಂಟೈನ್ ಆಗಿ ಚಿಕಿತ್ಸೆ ಪಡೆಯಲಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಜಾರಕಿಹೊಳಿ ಕೇಸಿಗೆ ಕೋವಿಡ್ ಟ್ವಿಸ್ಟ್ – ರೇಪ್ ಕೇಸ್ ತನಿಖೆಗೆ ಅಡ್ಡಿಯಾಗುತ್ತಾ?

Click to comment

Leave a Reply

Your email address will not be published. Required fields are marked *