ಬೆಂಗಳೂರು: ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ, ಜಾರಿಗೆ ಬಂದ ಕಾರ್ಯಕ್ರಮಗಳನ್ನ ಎಲ್ಲಾ ಸರ್ಕಾರಗಳು ಉಳಿಸಿಕೊಂಡು ಬರುತ್ತಿವೆ. ಬಿಜೆಪಿ ಸರ್ಕಾರ ಕೂಡಾ ಹಿಂದಿನ ಸರ್ಕಾರಗಳು ಮಾಡಿದ ಯೋಜನೆ ಮುಂದುವರೆಸಿದೆ. ಈ ಗ್ಯಾರಂಟಿ (Congress Guarantee) ಯೋಜನೆಗಳು ಕೂಡಾ ಹಾಗೆ ಯಥಾಸ್ಥಿತಿಯಲ್ಲಿ ಮುಂದುವರಿದುಕೊಂಡು ಹೋಗುತ್ತದೆ ಎಂದು ಮಾಜಿ ಸಚಿವ ಶ್ರೀರಾಮುಲು (Sriamulu) ಹೇಳಿದ್ದಾರೆ.
Advertisement
ಮಾಜಿ ಸಚಿವರಾದ ಶ್ರೀರಾಮುಲು ಅವರು ಸೋಮವಾರ ಬೆಂಗಳೂರಿನಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಮಗಳ ಮದುವೆಯ ಆಮಂತ್ರಣ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರಮನೆ ಮೈದಾನದಲ್ಲಿ ನನ್ನ ಮಗಳ ಮದುವೆ ಕಾರ್ಯಕ್ರಮ ಇದೆ. ಹೀಗಾಗಿ ಸಿಎಂ ಮತ್ತು ಡಿಸಿಎಂಗೆ ಆಹ್ವಾನ ನೀಡಲು ಬಂದಿದ್ದೆ. ಇದು ನನ್ನ ಖಾಸಗಿ ಕಾರ್ಯಕ್ರಮ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸಪಷ್ಟಪಡಿಸಿದರು. ಇದನ್ನೂ ಓದಿ: ರೋಹಿತ್ ಶರ್ಮಾ ವಿಶ್ವದಲ್ಲೇ ಅತ್ಯಂತ ನತದೃಷ್ಟ ವ್ಯಕ್ತಿ – ಶತಕ ಸಿಡಿಸಿದ ಟ್ರಾವಿಸ್ ಹೆಡ್ ಮಾತು
Advertisement
Advertisement
ರಾಜ್ಯಾಧ್ಯಕ್ಷ ಸ್ಥಾನ ಮತ್ತು ವಿಪಕ್ಷ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಯತ್ನಾಳ್ ಬಹಿರಂಗ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಪಕ್ಷದಲ್ಲಿ ಒಂದುಬಾರಿ ರಾಜ್ಯಾಧ್ಯಕ್ಷರಾಗಿ ಘೋಷಣೆ ಮಾಡಿದ ನಂತರ ಮುಗೀತು. ಯತ್ನಾಳ್ ಅವರು ಹಿರಿಯ ನಾಯಕರು. ಒಂದು ಬಾರಿ ಪಾರ್ಟಿ ನಿರ್ಧಾರ ಮಾಡಿದ ಮೇಲೆ ಎಲ್ಲವನ್ನೂ ಸರಿ ಮಾಡಿಕೊಂಡು ಹೋಗ್ತೀವಿ. ಪಕ್ಷ ಮುನ್ನಡೆಸಬೇಕು ಹೀಗಾಗಿ ಎಲ್ಲ ಸರಿ ಮಾಡಿಕೊಂಡು ಹೋಗ್ತೀವಿ. ಅಶೋಕ್ ವಿಪಕ್ಷ ನಾಯಕ ಆಗಿ ನೇಮಕ ಆದ್ರು. ವಿಜಯೇಂದ್ರ ಕಿರಿಯರೇ ಇರಬಹುದು, ಆದ್ರೆ ಹೈಕಮಾಂಡ್ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಎಲ್ಲರೂ ಸಹಕಾರ ನೀಡಿದ್ರೆ ಪಕ್ಷ ಕಟ್ಟಲು ಅನುಕೂಲವಾಗುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗಾಜಾದ ಆಸ್ಪತ್ರೆಯನ್ನೇ ಉಗ್ರ ಚಟುವಟಿಕೆಗಳ ತಾಣವಾಗಿಸಿದ ಹಮಾಸ್- ಇಸ್ರೇಲ್ ವೀಡಿಯೋ ಸಾಕ್ಷಿ
Advertisement
ಬಿಜೆಪಿ ಅಧಿಕಾರಕ್ಕೆ ಬಂದ್ರೆ ಗ್ಯಾರಂಟಿ ಯೋಜನೆ ರದ್ದು ಮಾಡುತ್ತೆ ಎಂದು ಪ್ರಚಾರ ಮಾಡಿ ಎಂಬ ಡಿಕೆಶಿವಕುಮಾರ್ ಹೇಳಿಕೆ ವಿಚಾರ ಕುರಿತು ಮಾತನಾಡಿ, ದೇಶಕ್ಕೆ ಸ್ವಾತಂತ್ರ‍್ಯ ಬಂದಾಗಿನಿಂದ ಇಲ್ಲಿವರೆಗೂ ಅನೇಕ ಯೋಜನೆಗಳು ಜಾರಿಗೆ ಬಂದಿವೆ. ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಜಾರಿಗೆ ಬಂದ ಕಾರ್ಯಕ್ರಮಗಳನ್ನ ಎಲ್ಲಾ ಸರ್ಕಾರಗಳು ಉಳಿಸಿಕೊಂಡು ಬರುತ್ತಿವೆ. ಬಿಜೆಪಿ ಸರ್ಕಾರ ಕೂಡಾ ಹಿಂದಿನ ಸರ್ಕಾರಗಳು ಮಾಡಿದ ಯೋಜನೆ ಮುಂದುವರೆಸಿದೆ. ಈ ಗ್ಯಾರಂಟಿ ಯೋಜನೆಗಳು ಕೂಡಾ ಹಾಗೆ ಯಥಾಸ್ಥಿತಿಯಲ್ಲಿ ಮುಂದುವರೆದುಕೊಂಡು ಹೋಗುತ್ತದೆ. ಕಾಂಗ್ರೆಸ್ ಕೊಟ್ಟಿರೋ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಗ್ಯಾರಂಟಿ ಯೋಜನೆಗಳು ಜನರಿಗೆ ತೃಪ್ತಿ ಆಗಿದ್ದರೆ, ಜನರೇ ಅರ್ಥ ಮಾಡಿಕೊಂಡು ಸಪೋರ್ಟ್ ಮಾಡ್ತಾರೆ. ಯೋಜನೆಗಳು ಸರಿಯಾಗಿ ಸಿಗದೇ ಹೋದರೆ ಜನ ವಿರೋಧ ಮಾಡೇ ಮಾಡ್ತಾರೆ ಎಂದು ಹೇಳಿದ್ದಾರೆ.