ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ಖಚಿತ, ಸಾಲ ನಿಶ್ಚಿತ, ಬೆಲೆ ಏರಿಕೆ ಖಂಡಿತ – ಸುನೀಲ್‌ ಕುಮಾರ್‌ ಲೇವಡಿ

Public TV
2 Min Read
SUNILKUMAR

– ಕಾಂಗ್ರೆಸ್ ವಿರುದ್ಧ ಮಾಜಿ ಇಂಧನ ಸಚಿವ ಟೀಕೆ

ಬೆಂಗಳೂರು: ಉಚಿತ ಯೋಜನೆಗಳನ್ನು (Government Free Scheme) ಜಾರಿಗೆ ತರುವ ಭರಾಟೆಯಲ್ಲಿ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ ಎಂದು ಮಾಜಿ ಇಂಧನ ಸಚಿವ ಸುನೀಲ್‌ ಕುಮಾರ್‌ (Sunil Kumar) ಟೀಕಿಸಿದ್ದಾರೆ

ಕಾಂಗ್ರೆಸ್‌ ಉಚಿತ ಗ್ಯಾರಂಟಿಗಳ (Congress Guarantee)ಕುರಿತು ಸರಣೀ ಟ್ವೀಟ್‌ ಮೂಲಕ ಆಕ್ರೋಶ ಹೊರಹಾಕಿದ್ದು, ಜನರಿಗೆ ಕತ್ತಲೆ ಭಾಗ್ಯ ನೀಡೋದು ಗ್ಯಾರಂಟಿ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಾಳೆಯಿಂದ ಆರಂಭ: ಲಕ್ಷ್ಮಿ ಹೆಬ್ಬಾಳ್ಕರ್

ಟ್ವೀಟ್‌ನಲ್ಲಿ ಏನಿದೆ..?
ಸಿದ್ದರಾಮಯ್ಯನವರೇ (Siddaramaiah) ವ್ಯವಸ್ಥೆಯನ್ನು ಎತ್ತ ಕೊಂಡೊಯ್ಯುತ್ತಿದ್ದೀರಿ? ನಿಮ್ಮ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಜಾಹೀರಾತು ಕೊಟ್ಟ ಮಾತ್ರಕ್ಕೆ ಕತ್ತಲೆ ಕಳೆಯಲು ಸಾಧ್ಯವೇ? ನೀವು ಘೋಷಣೆ ಇಲ್ಲದೇ‌ ಮಾಡುತ್ತಿರುವ ಲೋಡ್ ಶೆಡ್ಡಿಂಗ್ ನಿಂದ ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಕುಂಠಿತಗೊಳ್ಳುವುದರಲ್ಲಿ ಅನುಮಾನ ಇಲ್ಲ.

ರೈತರ ಐಪಿ ಸೆಟ್ ಗಳಿಗೆ ನಿರಂತರ ಏಳು ಗಂಟೆಗಳ ಕಾಲ ಪೂರೈಕೆ ಮಾಡುತ್ತಿದ್ದ ವಿದ್ಯುತ್ ಕಡಿತಗೊಳಿಸಲಾಗಿದೆ.ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅನಿಯಮಿತ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ (Load Shedding) ಪ್ರಾರಂಭವಾಗಿದೆ. ನಿರ್ವಹಣೆ ಹೆಸರಿನಲ್ಲಿ ಪವರ್ ಕಟ್ ಕಣ್ಣಾಮುಚ್ಚಾಲೆ ನಡೆಸುತ್ತಿರುವುದು ಸುಳ್ಳೇ? ಇದನ್ನೂ ಓದಿ: ಜೂನ್ 18ರಿಂದ 22ರವರೆಗೂ ಬೆಂಗಳೂರು, ಹಳೆ ಮೈಸೂರು ಭಾಗದಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಉಚಿತ ಯೋಜನೆಗಳ ಜಾರಿಯ ಭರಾಟೆಯಲ್ಲಿ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ. ಉಚಿತ.. ಉಚಿತ.. ಎಂಬ ನಿಮ್ಮ ಭಾಷಣದ ಭರಾಟೆಗೆ ಮರುಳಾದ ಜನರಿಗೆ ಈಗ ಕತ್ತಲೆ ಖಚಿತ, ಸಾಲ ನಿಶ್ಚಿತ, ಬೆಲೆ ಏರಿಕೆ ಖಂಡಿತ ಎಂಬುದು ತಿಂಗಳು ಕಳೆಯುವಷ್ಟರಲ್ಲೇ ಅರಿವಾಗಿದೆ ಎಂದು ಕುಟುಕಿದ್ದಾರೆ.

Share This Article