ಬಾಗಲಕೋಟೆ: ಜಿಲ್ಲೆಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಚಿವೆ ಉಮಾಶ್ರೀ ಅವರು ಮಾಜಿ ಸಿಎಂ ಸಿದ್ದರಾಮಯ್ಯನವರ ಜೊತೆ ಕಾಣಿಸಿಕೊಂಡಿದ್ದಾರೆ.
ಅಭಿನಂದನಾ ಕಾರ್ಯಕ್ರಮಕ್ಕೂ ಮುನ್ನ ಜಮಖಂಡಿ ನಗರದ ರಾಯಲ್ ಪ್ಯಾಲೆಸ್ ಸ್ಕೂಲ್ ನಲ್ಲಿ ಭೋಜನವನ್ನು ಆಯೋಜಿಸಲಾಗಿತ್ತು. ಈ ವೇಳೆ ಸಿದ್ದರಾಮಯ್ಯ ಮತ್ತು ಉಮಾಶ್ರೀ ಒಟ್ಟಿಗೆ ಭೋಜನ ಮಾಡಿದರು.
ಈ ಕಾರ್ಯಕ್ರಮಕ್ಕೂ ಮುನ್ನ ಬೆಳಗಾವಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆ ಕಾಂಗ್ರೆಸ್ ಪಕ್ಷದಿಂದ ತಯಾರಿ ನಡೆದಿದೆ. ಆದರೆ ಕರ್ನಾಟಕದಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡಲ್ಲ. ಅವು ಉತ್ತರ ಪ್ರದೇಶದ ಅಮೇಥಿಯಿಂದಲೇ ಸ್ಪರ್ಧಿಸುತ್ತಾರೆ. ಪಕ್ಷದಿಂದ ಇಂತಹ ಚಿಂತನೆ ಕೂಡ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಸಂಪುಟ ವಿಸ್ತರಣೆ ಬಳಿಕ ಉಂಟಾಗಿರುವ ಅಸಮಾಧಾನದ ಬಗ್ಗೆ ಪ್ರತಿಕ್ರಿಯೆ ನೀಡಿ, ರಮೇಶ ಜಾರಕಿಹೊಳಿ, ಬಿ ಸಿ ಪಾಟೀಲ್ ಅವರ ಅಸಮಾಧಾನ ಸಹಜ. ಆದರೆ ಎಲ್ಲರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ. ರಮೇಶ ಜಾರಕಿಹೊಳಿ ಅವರೊಂದಿಗೆ ನಾನು ಮಾತುಕತೆ ಮಾಡುತ್ತೇನೆ. ಆದರೆ ಮಾಜಿ ಸಿಎಂ ಯಡಿಯೂರಪ್ಪ ಅವರು ಹಗಲು ಕನಸು ಕಾಣುತ್ತಿದ್ದಾರೆ. ಯಡಿಯೂರಪ್ಪ ಮಾತಿಗೆ ಕಿಮ್ಮತ್ತೆ ಇಲ್ಲ. ಇತ್ತೀಚಿಗೆ ಸುಳ್ಳು ಹೇಳುವ ಪದ್ಧತಿ ಹೆಚ್ಚಾಗಿದೆ ಎಂದು ಟಾಂಗ್ ನೀಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv