ಮಂಗಳೂರು: ತಮಿಳುನಾಡಿನ ಕನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದ ಯಾರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿಲ್ಲ. ಯಾಕೆ ಈವರೆಗೂ ಯಾರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ. ಈ ಬಗ್ಗೆ ಗೃಹ ಸಚಿವರು ಉತ್ತರ ನೀಡಬೇಕು ಎಂದು ಶಾಸಕ ಯು.ಟಿ ಖಾದರ್ ಒತ್ತಾಯಿಸಿದರು.
Advertisement
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾಕೆ ಯಾರೂ ದೇಶದ್ರೋಹಿಗಳೆಂದು ಕರೆದಿಲ್ಲ. ಯಾಕೆ ಯಾರೂ ಕಠಿಣ ಕ್ರಮಕ್ಕೆ ಒತ್ತಾಯಿಸಿಲ್ಲ. ಈ ವಿಚಾರದಲ್ಲಿ ಬಿಜೆಪಿ ಮುಖಂಡರು ಯಾಕೆ ಮೌನ ವಹಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಳ್ಳಾರಿ ಉಸ್ತುವಾರಿ ಬದಲಾಗದಿದ್ದರೆ ಜನವರಿಯಲ್ಲಿ ಸತ್ಯಾಗ್ರಹ ಆರಂಭಿಸುತ್ತೇನೆ: ಸೋಮಶೇಖರ್ ರೆಡ್ಡಿ
Advertisement
ಸಿ.ಡಿ.ಎಸ್ ಬಿಪಿನ್ ರಾವತ್ ಅವರ ಸಾವನ್ನು ಕೆಲ ವಿಕೃತ ಮನಸ್ಸುಗಳು ಸಂಭ್ರಮಿಸಿವೆ. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿ ಸಂಭ್ರಮಿಸಿವೆ. ಅಂಥವರನ್ನು ಪತ್ತೆ ಹಚ್ಚಿ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ದೇಶ ದ್ರೋಹಿಗಳು ದೇಶಕ್ಕೆ ಮಾರಕ. ಈ ರೀತಿಯ ವ್ಯಕ್ತಿಗಳ ಮುಖವಾಡ ಕಳಚಿ ದೇಶಕ್ಕೆ ಅವರ ನಿಜ ರೂಪ ತೋರಿಸಬೇಕು ಎಂದು ಕಿಡಿಕಾರಿದರು.
Advertisement
Advertisement
ರಾಜ್ಯದಲ್ಲಿ ಮತಾಂತರ ತಡೆ ಕಾನೂನು ತರಲು ಹೊರಟಿರುವುದೇ ಒಂದು ಪೊಲಿಟಿಕಲ್ ಗಿಮಿಕ್. ಜನರ ಗಮನ ಬೇರೆಡೆ ಸೆಳೆಯಲು ಈ ಮತಾಂತರ ವಿಷಯ ಮುನ್ನೆಲೆಗೆ ತರಲಾಗಿದೆ. ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸಲಾಗುತ್ತಿದೆ. ರಾಜ್ಯ ಸರ್ಕಾರದ ವೈಫಲ್ಯವನ್ನು ಮರೆಮಾಚಲು ಬಿಜೆಪಿ ನಾಯಕರು ಮತಾಂತರದ ವಿಚಾರ ಎತ್ತಿದ್ದಾರೆ ಎಂದು ಗರಂ ಆದರು. ಇದನ್ನೂ ಓದಿ: ಬೆಳಗಾವಿಯಿಂದ ‘ಸುಶಾಸನ ಸಂಗಮ’ಕ್ಕೆ ವಾರಾಣಸಿಗೆ ಹೊರಟ ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಬಡವರಿಗೆ ರೇಷನ್ ಕಾರ್ಡ್ ಸಿಗುತ್ತಿಲ್ಲ. ಬಡವರಿಗಾಗಿ ಮನೆ ಕಟ್ಟಿಕೊಡಲಾಗಿಲ್ಲ. ಕೋವಿಡ್ ನಿಂದ ಮೃತ ಪಟ್ಟವರ ಕುಟುಂಬಗಳಿಗೆ ಪರಿಹಾರ ಈವರೆಗೂ ನೀಡಲಾಗಿಲ್ಲ. ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಬಿಟ್ ಕಾಯಿನ್ ವಿವಾದ ಬಗ್ಗೆ ತನಿಖೆ ಮುಂದುವರಿದಿಲ್ಲ. ಜನರು ಗಮನ ಬೇರೆಡೆಗೆ ಸೆಳೆಯಲು ಮತಾಂತರ ವಿಚಾರ ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿದರು.