ಧಾರವಾಡ: ಜಿಲ್ಲೆಯ ಮಾಜಿ ಶಾಸಕರೊಬ್ಬರು ಈಗ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧರಾಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಕ್ಷೇತ್ರದ ಜೆಡಿಎಸ್‍ನ ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ ಅವರೇ ನಾಳೆ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಇವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ತಾರೆ ಎಂದು ಮಾಹಿತಿ ಇತ್ತು. ಅಲ್ಲದೇ ಕೋನರೆಡ್ಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ನವಲಗುಂದ ಕ್ಷೇತ್ರದಲ್ಲಿ ಓಡಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದರು. ಈಗ ಅವರೇ ಪಬ್ಲಿಕ್ ಟಿವಿಗೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಖಚಿತ ಮಾಹಿತಿ ನೀಡಿದ್ದಾರೆ.
ನಾಳೆ ಬೆಳಗಾವಿ ಅಧಿವೇಶನಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗಮಿಸುತ್ತಿದ್ದಾರೆ. ಅವರ ಸಮ್ಮುಖದಲ್ಲೇ ಬೆಳಗಾವಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೋನರೆಡ್ಡಿ ಕೈ ಸೇರ್ಪಡೆ ಆಗಲಿದ್ದಾರೆ.
ಕಳೆದ 30 ವರ್ಷಗಳಿಂದ ಜೆಡಿಎಸ್ ನಲ್ಲಿದ್ದ ಕೋನರೆಡ್ಡಿ, ಕ್ಷೇತ್ರದ ಜನರ ಒತ್ತಾಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಅಲ್ಲದೆ ಜೆಡಿಎಸ್ ಪಕ್ಷ, ಕುಮಾರಸ್ವಾಮಿ ಹಾಗೂ ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವ ಇದೆ ಎಂದು ಕೂಡ ಕೋನರೆಡ್ಡಿ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಓಮಿಕ್ರಾನ್ ಸೋಂಕು ಪತ್ತೆ- ರಾಜ್ಯದಲ್ಲಿ ಸಂಖ್ಯೆ 3ಕ್ಕೇರಿಕೆ
ಕಳೆದ 2013 ರಲ್ಲಿ ಕೋನರೆಡ್ಡಿ ಒಮ್ಮೆ ಮಾತ್ರ ನವಲಗುಂದ ಕ್ಷೇತ್ರದಿಂದ ಗೆದ್ದು ಬಂದಿದ್ದು, ಈಗ ಕಾಂಗ್ರೆಸ್ ಸೇರಿದ ಮೇಲೆ ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಯತ್ನ ನಡೆಸಲಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಪ್ರಧಾನಿಗೆ ಭಗವದ್ಗೀತೆ ಗಿಫ್ಟ್ ಕೊಟ್ಟ ಐರಾವತ ನಟಿ