ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರಿಗೆ ಯುವಕನೊಬ್ಬ ತರಾಟೆಗೆ ತೆಗೆದುಕೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ.
ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದ ರಮೇಶ್ ಬಾಬು ಬಂಡಿಸಿದ್ದೇಗೌಡ ಸೋಮವಾರ ಸಂಜೆ ಚುನಾವಣಾ ಪ್ರಚಾರಕ್ಕೆಂದು ಹುಲಿಕೆರೆ ಗ್ರಾಮಕ್ಕೆ ಹೋಗಿದ್ದರು. ಮತದಾರರನ್ನು ಮಾತನಾಡಿಸುತ್ತ ಪಕ್ಷದ ಪರ ಪ್ರಚಾರ ಮಾಡುತ್ತಿದ್ದರು.
ಈ ವೇಳೆ ಸ್ಥಳದಲ್ಲಿದ್ದ ಯುವಕನೊಬ್ಬ ಐದು ವರ್ಷದಿಂದ ಎಲ್ಲಿಗೆ ಹೋಗಿದ್ರಿ ಈಗ ಬಂದಿದ್ದೀರಲ್ಲ ಎಂದು ಆಕ್ರೋಶ ಹೊರಹಾಕಿದ್ದಾನೆ. ಯುವಕ ಸಿಟ್ಟಿನಿಂದ ಮಾತನಾಡುತ್ತಿದ್ದರು, ಶಾಸಕರು ಮಾತ್ರ ಯಾವುದೇ ಪ್ರತಿಕ್ರಿಯೆಯನ್ನಾಗಲಿ, ಸಿಟ್ಟನ್ನಾಗಲಿ ತೋರಿಸಿಕೊಳ್ಳಲಿಲ್ಲ. ಬದಲಿಗೆ ಮತದಾರರನ್ನು ಮಾತನಾಡಿಸಿ ತಮ್ಮ ಪಾಡಿಗೆ ತಾವು ಹೊರಟು ಹೋಗಿದ್ದಾರೆ.
ಇಡೀ ದೃಶ್ಯವನ್ನು ಮೊಬೈಲ್‍ನಲ್ಲಿ ಚಿತ್ರೀಕರಿಸಲಾಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.