ಬೆಳಗಾವಿ: ಗ್ರಾಮೀಣ ಕ್ಷೇತ್ರದಲ್ಲೀ ಈಗಿನಿಂದಲೇ ಡಬ್ಬಿ-ಕುಕ್ಕರ್ ಗಳನ್ನು ಹಂಚಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ವಿರುದ್ಧ ಮಾಜಿ ಶಾಸಕ ಸಂಜಯ್ ಪಾಟೀಲ್ (Sanjay Patil) ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಚುನಾವಣೆ (Election) ಮಾಡುವ ಪದ್ಧತಿ ಬೇರೆಲ್ಲೂ ಇಲ್ಲ. ಈಗಲೇ ಡಬ್ಬಿ- ಕುಕ್ಕರ್ ಗಳನ್ನು ಹಂಚುವ ಕೆಲಸಗಳು ಗ್ರಾಮೀಣ ಭಾಗದಲ್ಲಿ ನಡೆಯುತ್ತಿವೆ. ನೀವು ಒಳ್ಳೆಯ ಕೆಲಸ ಮಾಡಿದ್ರೆ ಡಬ್ಬಿ ಹಂಚುವ ಅವಶ್ಯಕತೆ ಏನಿದೆ?. ಅವರು ಡಬ್ಬಿ ಹಂಚುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ತೇಜಸ್ವಿ ಸೂರ್ಯ ದೋಸೆ ಸವಿದಿದ್ದನ್ನು ಟೀಕಿಸಿದ್ದ ಕಾಂಗ್ರೆಸ್‍ಗೆ ಬಿಜೆಪಿ ತಿರುಗೇಟು
Advertisement
Advertisement
ನಾನು ಪಕ್ಷ ಸಂಘಟನೆ ಮಾಡುತ್ತಿದ್ದೇನೆ. 10 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಶಾಸಕ(MLA) ನಾಗುವ ಆಸೆ ಇದೆ. ನಾನೇನೂ ಸನ್ಯಾಸಿ ಅಲ್ಲ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ. ಎರಡು ಸಲ ಶಾಸಕನಾಗಿದ್ದೇನೆ. ಈಗ ಜಿಲ್ಲಾಧ್ಯಕ್ಷನಾಗಿರುವೆ ಮುಂದೆಯೂ ರಾಜಕಾರಣದಲ್ಲಿ ಇರುತ್ತೇನೆ. ಟಿಕೆಟ್ ಯಾರಿಗೆ ಸಿಗುತ್ತದೆಯೋ ಅವರ ಪರ ಎಲ್ಲರೂ ಕೆಲಸ ಮಾಡಬೇಕು ಎಂದರು.
Advertisement
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಹೆಚ್ಚಾಗುತ್ತಿರುವುದು ತಪ್ಪಲ್ಲ. ಪಾರ್ಟಿ ಸಂಘಟನಾತ್ಮಕವಾಗಿ ಬೆಳೆಯುತ್ತಿರುವ ಕಾರಣಕ್ಕೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗ್ತಿದೆ. ಜಿಲ್ಲಾ ಅಧ್ಯಕ್ಷನಾಗಿ ಆ ಬಗ್ಗೆ ನನಗೆ ಹೆಮ್ಮೆಯಿದ್ದು ಜಿಲ್ಲಾಧ್ಯಕ್ಷನಾಗಿ ಪಕ್ಷ ಸಂಘಟನೆ ಮಾಡ್ತಿದ್ದೇನೆ. ಗ್ರಾಮೀಣ ಕ್ಷೇತ್ರದಲ್ಲೂ ಸಂಘಟನೆ ನಡೆದಿದೆ ಎಂದು ಬೆಳಗಾವಿಯಲ್ಲಿ ಮಾಜಿ ಶಾಸಕ ಸಂಜಯ್ ಪಾಟೀಲ್ ಹೇಳಿದರು.