ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ ಸುರೇಶ್ (DK Suresh) ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ (Bengaluru City Police Commissioner) ದೂರು ನೀಡಿದ್ದಾರೆ.
Advertisement
ಈ ಬಗ್ಗೆ ಡಿ.ಕೆ ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಭಾನುವಾರ ಪತ್ರ ಬರೆದಿದ್ದಾರೆ. ಐಶ್ವರ್ಯಾ ಗೌಡ (Aishwarya Gowda) ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ. ಇದನ್ನೂ ಓದಿ: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಮೃತ ಸಚಿನ್ ವಿರುದ್ಧವೇ ಲಕ್ಷಾಂತರ ರೂಪಾಯಿ ವಂಚನೆ ಆರೋಪ
Advertisement
Advertisement
ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ದೂರು ಪತ್ರದಲ್ಲಿ ಸುರೇಶ್ ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಹೀನಾಯ ಸೋಲು – ಆಸ್ಟ್ರೇಲಿಯಾಗೆ 184 ರನ್‌ಗಳ ಭರ್ಜರಿ ಗೆಲುವು
Advertisement
ಮಂಡ್ಯದ ಉದ್ಯಮಿಗೂ ದೋಖಾ
ಆರೋಪಿ ಸ್ಥಾನದಲ್ಲಿರುವ ಐಶ್ವರ್ಯಗೌಡ ಬಿಲ್ಡರ್, ಚಿನ್ನದ ವ್ಯಾಪಾರಿ ಕಮ್ ಕಾಂಗ್ರೆಸ್ ಮುಖಂಡನಿಗೂ ಸಹ ಕೋಟ್ಯಂತರ ರೂಪಾಯಿ ಟೋಪಿ ಹಾಕಿರೋದು ಬೆಳಕಿಗೆ ಬಂದಿದೆ. ಸದ್ಯ ಆ ಉದ್ಯಮಿ ತನ್ನ ಹೆಸರು ಬಹಿರಂಗಪಡಿಸಬೇಡಿ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ವಾಸವಿರುವ ಆತ ಮೈಸೂರು, ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಾ ಆತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾನೆ. ಐಶ್ವರ್ಯ ಗೌಡ ಈ ವ್ಯಕ್ತಿಯಿಂದ 6.5 ಕೋಟಿ ಹಣ ಹಾಗೂ ಒಂದಷ್ಟು ಗೋಲ್ಡ್‌ನ್ನು ಪಡೆದಿದ್ದಾಳೆ ಎನ್ನಲಾಗಿದೆ. ಇದನ್ನೂ ಓದಿ: ಇಸ್ರೋದ ಸ್ಪೇಡೆಕ್ಸ್ ಉಪಗ್ರಹಕ್ಕೆ ರಾಜ್ಯದ ಬಿಜಿಎಸ್ ಕಾಲೇಜಿನ ಪೇಲೋಡ್ ಸೇರ್ಪಡೆ
ಒಂದೂವರೆ ವರ್ಷದ ಹಿಂದೆ ಈ ಉದ್ಯಮಿ ಕಮ್ ಕಾಂಗ್ರೆಸ್ ಮುಖಂಡನಿಗೆ ಐಶ್ವರ್ಯ ಗೌಡ ಪರಿಚಯವಾಗಿದ್ದಾಳೆ. ಐಷಾರಾಮಿ ಕಾರು, ಬೌನ್ಸರ್, ಗನ್‌ಮ್ಯಾನ್ ಜೊತೆಗೆ ಬಂದು ಆ ಉದ್ಯಮಿಯನ್ನು ಪರಿಚಯ ಮಾಡಿಕೊಂಡಿದ್ದಾಳೆ. ನಂತರ ಇವರಿಬ್ಬರು ಸೇರಿ ರಿಯಲ್ ಎಸ್ಟೇಟ್ ವ್ಯವಹಾರವನ್ನು ಮಾಡಿದ್ದಾರೆ. ಆರಂಭದಲ್ಲಿ ಎಲ್ಲಾ ವ್ಯವಹಾರ ಸರಿಯಾಗಿ ಈ ವಂಚಕಿ ಐಶ್ವರ್ಯ ಗೌಡ ಮಾಡಿದ್ದಾಳೆ. ಇದಾದ ಬಳಿಕ ಆ ವ್ಯಕ್ತಿಯಿಂದ ಚಿನ್ನ ಹಾಗೂ ನಗದು ರೂಪದಲ್ಲಿ 6.5 ಕೋಟಿ ಹಣವನ್ನು ಪಡೆದಿದ್ದಾಳೆ. ಬಳಿಕ ಹಣವನ್ನು ಆತ ಕೇಳಿದ್ರೆ ಇಂದು, ನಾಳೆ ಎಂದು ಕಥೆ ಹೇಳ್ತಾ ಬಂದಿದ್ದಾಳೆ. ಆಗ ರಾಜ್ಯದ ಪ್ರಭಾವಿ ರಾಜಕಾರಣಿ ಮಧ್ಯಸ್ಥಿಕೆ ವಹಿಸಿ ಸಮಯ ನೀಡುವಂತೆ ಹೇಳಿದ್ದಾರೆ. ಇದೀಗ ಈಕೆಯ 9 ಕೋಟಿ ಗೋಲ್ಡ್ ದೋಖಾ ಕಹಾನಿ ಹೊರಬಂದ ಬಳಿಕ ಉದ್ಯಮಿ ಕಮ್ ಕಾಂಗ್ರೆಸ್ ಮುಖಂಡನಿಗೆ ವಂಚನೆಗೆ ಒಳಗಾಗಿರೋದು ಗೊತ್ತಾಗಿದೆ. ಹೀಗಾಗಿ ಆತ ಐಶ್ವರ್ಯ ಗೌಡ ಮೇಲೆ ಮಂಡ್ಯ ಅಥವಾ ಬೆಂಗಳೂರಿನಲ್ಲಿ ದೂರು ದಾಖಲು ಮಾಡಲು ದಾಖಲೆ ಸಮೇತ ಸಿದ್ಧರಾಗಿದ್ದಾರೆ.