– ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಆರೋಪ; ದೆಹಲಿಯಲ್ಲಿ ಪ್ರತಿಭಟನಾ ಸಭೆ
ನವದೆಹಲಿ: ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ (Union Government) ತೆರಿಗೆ ವಂಚನೆಯಾಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ (Narendra Modi) ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು.
Advertisement
ದೆಹಲಿಯ ಕರ್ನಾಟಕ ಸಂಘದಲ್ಲಿ ರಾಜ್ಯಸಭೆ ಮಾಜಿ ಸಂಸದ ಎಲ್. ಹನುಮಂತಯ್ಯ (L Hanumanthaiah) ಅವರ ನೇತೃತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ರಾಜ್ಯದ ಪ್ರಮುಖ ಸಾಹಿತಿಗಳು, ಚಿಂತಕರು, ಕನ್ನಡಪರ ಹೋರಾಟಗಾರರು, ರೈತ ನಾಯಕರು, ಮಹಿಳಾ ಹೋರಾಟಗಾರ್ತಿಯರು ಭಾಗಿಯಾಗಿದ್ದರು. ಪ್ರತಿಭಟನಾ ಸಭೆ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು. ಇದನ್ನೂ ಓದಿ: ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸಬೇಕು: ಅರವಿಂದ ಬೆಲ್ಲದ್
Advertisement
Advertisement
ಸಭೆಯಲ್ಲಿ ಮಾತನಾಡಿದ ಎಲ್.ಹನುಮಂತಯ್ಯ, ಪ್ರಧಾನಿ ಮೋದಿ ಅವರ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು ಎಂದು ಒತ್ತಾಯಿಸಿದರು. ಪ್ರತಿಯೊಂದು ರಾಜ್ಯದ ಭಾಷೆ, ಸಂಸ್ಕೃತಿ ವೈವಿಧ್ಯತೆಯನ್ನು ಒಕ್ಕೂಟ ಸರ್ಕಾರ ಕಾಪಾಡಬೇಕು. ಅದರ ಬದಲು ಏಕಮುಖ ಸಂಸ್ಕೃತಿ ಏರಿಕೆ ಮಾಡಬಾರದು ಎಂದರು. ರಾಜ್ಯಕ್ಕೆ ಬರಬೇಕಿರುವ ನ್ಯಾಯಬದ್ಧವಾದ ತೆರಿಗೆಯನ್ನು ನೀಡಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಶಿವರಾಂ ಎಚ್ಚರಿಕೆ ನೀಡಿದರು.
Advertisement
ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ ವಿಜಯ್‌ಕುಮಾರ್ ಮಾತನಾಡಿ, ದೇಶದ ಆತಂರಿಕ ಶಾಂತಿಗಾಗಿ ದೆಹಲಿಯಲ್ಲಿ ಸಭೆ ಮಾಡುವ ಅನಿವಾರ್ಯತೆ ಬಂದಿದೆ. ಬುದ್ಧಿ ಹೇಳುವ ವ್ಯವಸ್ಥೆಯ ವಿರುದ್ಧವೇ ನಾವು ಮಾತನಾಡಬೇಕಾದ ಅನಿವಾರ್ಯತೆ ಇದೆ. ಐಟಿ, ಇಡಿ ಸಿಬಿಐ ಅನ್ನು 65 ವರ್ಷ ಕಾಂಗ್ರೆಸ್ ನಡೆಸಿಕೊಂಡ ರೀತಗು, ಬಿಜೆಪಿ ನಡೆಸಿಕೊಂಡ ರೀತಿಗು ಭಿನ್ನವಾಗಿದೆ ಎಂದರು. ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಫ್ಯಾನ್ಸ್‌ಗೆ ಡಬಲ್ ಧಮಾಕ- ‘ಘಾಟಿ’ ಚಿತ್ರದ ಫಸ್ಟ್ ಲುಕ್ ಔಟ್
ಕನ್ನಡ ಪ್ರಾಧಿಕಾರದ ಸದಸ್ಯ ಟಿ. ಗುರುರಾಜ್ ಮಾತನಾಡಿ, ಕರ್ನಾಟಕ, ಕನ್ನಡಿಗರು ವಿಷಮ ಪರಿಸ್ಥಿತಿಯಲ್ಲಿ ನರಳುತ್ತಿದ್ದಾರೆ. ತಾರತಮ್ಯ ಮಾಡದೇ ಆಡಳಿತ ಮಾಡಬೇಕಿದ್ದ ಕೇಂದ್ರ ಸರ್ಕಾರ ಉತ್ತರ ಭಾರತ, ದಕ್ಷಿಣ ಭಾರತದ ಎಂದು ಮಲತಾಯಿ ಧೋರಣೆ ಮಾಡುತ್ತಿದೆ. ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಬರಬೇಕಿರುವ ತೆರಿಗೆ ಹಣ ನೀಡುತ್ತಿಲ್ಲ. ನರೇಂದ್ರ ಮೋದಿ ಅವರು ಸಾಮ್ರಾಟನ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅವರು ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದು ಮರೆತಿದ್ದಾರೆ. ನಮ್ಮ ತೆರಿಗೆ ಪಾಲು ಕೊಡಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಪ್ರತಿಭಟನೆ ನಡೆಸಿದರು ಎನ್ನುವ ಕಾರಣಕ್ಕೆ ಅವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳ ಬಳಕೆ ಮಾಡುತ್ತಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಪ್ರತಿಭಟನಾ ಸಭೆಯಲ್ಲಿ ಹಿರಿಯ ಕನ್ನಡ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಿ. ತಿಮ್ಮಯ್ಯ, ಖ್ಯಾತ ಸಾಹಿತಿ ಕಾಳೇಗೌಡ ನಾಗವಾರ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಂಜಗೆರೆ ಜಯಪ್ರಕಾಶ್, ಪ್ರಗತಿಪರ ರೈತ ಆರ್.ಸ್ವಾಮಿ ಆನಂದ, ರೆಸ್ಪಾನ್ಸಿಬಲ್ ಸಿಟಿಝನ್ಸ್ ವಾಯ್ಸ್ ಫೋರಂ ಅಧ್ಯಕ್ಷ ಎಫ್.ಎಂ ಕಲೀಂ ಮತ್ತಿತರು ಭಾಗಿಯಾಗಿದ್ದರು.