ಬೆಂಗಳೂರು: ನಾನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಬಂದಿದ್ದೇನೆ. ಒಂದು ಪಕ್ಷ ಬಿಡಲು ಬಲವಾದ ಕಾರಣ, ಅದು ಪಕ್ಷದಿಂದ ಆಗಿರಬೇಕು ಇಲ್ಲವೇ ನನ್ನಿಂದ ಆಗಿರಬೇಕು. ಅದು ನನ್ನ ಕಡೆಯಿಂದ ಆದ್ರೆ ಪಕ್ಷ ಸ್ಪಷ್ಟವಾಗಿ ಹೇಳಬೇಕು ಎಂದು ಮಾಜಿ ಸಂಸದ ಮುದ್ದಹನುಮೆಗೌಡ ಕಿಡಿಕಾರಿದ್ದಾರೆ.
Advertisement
ಸಿದ್ದರಾಮಯ್ಯ ಹಾಗೂ ಡಿಕೆಶಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ರಾಷ್ಟ್ರೀಯ ಪಕ್ಷ ಬಿಡಲು ಬಲವಾದ ಕಾರಣದಿಂದ ಇರಬೇಕು ತಾನೇ..? ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಮತ್ತು ಡಿಕೆಶಿ ಭೇಟಿ ಮಾಡಿ ನನ್ನ ಸ್ಪಷ್ಟ ನಿರ್ಧಾರ ತಿಳಿಸಿದ್ದೇನೆ. 1989ರಲ್ಲಿ ಕಾಂಗ್ರೆಸ್ ಬಿ ಫಾರಂ ಕೊಟ್ಟು ನಂತರ ಬೇರೆಯವರಿಗೆ ಕೊಟ್ಟಿದ್ರು. ಬಳಿಕ 2019ರಲ್ಲಿ ಸಂಸದ ಆಗಿದ್ದರೂ ನಿಲ್ಲಲು ಅವಕಾಶ ಕೊಡಲಿಲ್ಲ. ನಾಲ್ಕು ಬಾರಿ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ತಪ್ಪಿಸಲಾಗಿದೆ. ಕಾಂಗ್ರೆಸ್ ಪಕ್ಷ ಶಾಸಕ, ಸಂಸದರಾಗಿ ಆಯ್ಕೆಯಾಗಲು ಅವಕಾಶ ಕೊಟ್ರು ಎಂದರು.
Advertisement
Advertisement
ನಾನು ಅತ್ಯಂತ ಕ್ರೀಯಾಶೀಲನಾಗಿ ಪಕ್ಷ ಸಂಘಟನೆ ಮಾಡಿದ್ದೇನೆ. ಪಕ್ಷಕ್ಕೆ ನನ್ನದೇ ಆದ ಅಳಿಲು ಸೇವೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನನ್ನ ಸೇವೆಯೂ ಇದೆ. ನನ್ನ ಕ್ರಿಯಾಶೀಲ ರಾಜಕೀಯ ನಿಂತಿಲ್ಲ. ಪಕ್ಷಕ್ಕೆ ಕೂಡ ನನ್ನ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ. ನಾಲ್ಕು ಬಾರಿ ಸ್ಪರ್ಧೆಯಿಂದ ತಪ್ಪಿಸುವಂತಹ ಅನಿವಾರ್ಯ ಇರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಸೌದಿ ಮಹಿಳೆಗೆ 45 ವರ್ಷ ಜೈಲು ಶಿಕ್ಷೆ
Advertisement
ನನ್ನ ರಾಜಕೀಯ ಜೀವನವನ್ನು ಯಾವ ರೀತಿ ಎದುರಿಸಿದೆ ಎಂದು ಜನರಿಗೆ ಗೊತ್ತಿದೆ. ಪಕ್ಷದಿಂದ ಬಿಡುಗಡೆ ಮಾಡಿ ಎಂದು ಕೇಳಿದ್ದೇನೆ. ಇಷ್ಟು ವರ್ಷಗಳ ನಡೆದ ರಾಜಕೀಯ ದೊರಣೆಗಳು ಇಂತಹ ಪರಿಸ್ಥಿತಿಗೆ ಕಾರಣ. ಇವತ್ತು ಈ ನಿರ್ಧಾರ ಮಾಡಿದ್ದೇನೆ, ಮುಂದೆ ಒಳ್ಳೆಯ ಅವಕಾಶಗಳು ಬರುತ್ತವೆ ಎಂದರು.
ಸುರ್ಜೇವಾಲಾ ದೂರವಾಣಿ ಮೂಲಕ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಮಾತನಾಡಿದ್ರು. ಇತ್ತಿಚೆಗೆ ನನ್ನ ಜೊತೆ ಮಾತನಾಡಿಲ್ಲ. 2023ಕ್ಕೆ ನಾನು ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿ ಆಗುವುದು ಖಚಿತ. ನಾನು ಕಾಂಗ್ರೆಸ್ ನಿಂದ ದೂರ ಸರಿದಿದ್ದೇನೆ ಸಾಂಕೇತಿಕವಾಗಿ ಭೇಟಿ ಮಾಡಬೇಕಿತ್ತು. ಹೀಗಾಗಿ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ನಿಂದ ದೂರ ಹೋಗಿದ್ದೇನೆ. ಇಂದು ಸಂಜೆ ಒಳಗೆ ಅಧಿಕೃತವಾಗಿ ರಾಜೀನಾಮೆ ಕೊಡ್ತೀನಿ ಎಂದು ಮುದ್ದಹನುಮೇಗೌಡ ಹೇಳಿದರು.