ಕೆ.ಆರ್‌ ನಗರ‌ ಸಂತ್ರಸ್ತೆ ರೇಪ್‌ ಕೇಸ್‌ | ಪ್ರಜ್ವಲ್ ದೋಷಿ ಹೌದೋ, ಅಲ್ವೋ? – ಬುಧವಾರ ಹೊರಬೀಳಲಿದೆ ತೀರ್ಪು

Public TV
1 Min Read
PRAJWAL REVANNA 2 1

ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಭವಿಷ್ಯ ಬುಧವಾರ (ಜು.30) ನಿರ್ಧಾರವಾಗಲಿದೆ.

26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court) ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೋ ಅಥವಾ ಅಲ್ಲವೋ ಎಂದು ಬುಧವಾರ ತೀರ್ಪು ನೀಡಲಿದೆ. ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ತೀರ್ಪು ಬಹಳ ಮಹತ್ವದ್ದಾಗಿರಲಿದೆ.

ಈಗಾಗಲೇ ಕೆಆರ್ ನಗರ ಸಂತ್ರಸ್ತೆಯ ಅತ್ಯಾಚಾರ ಕೇಸ್‍ನಲ್ಲಿ ವಾದ-ಪ್ರತಿವಾದ ಮುಕ್ತಾಯವಾಗಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜು.30ಕ್ಕೆ ಆದೇಶ ಕಾಯ್ದಿರಿಸಿತ್ತು. ಕೆಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್‍ ದಾಖಲಾಗಿತ್ತು. ಸದ್ಯಕ್ಕೆ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿದ್ದಾರೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ದೃಶ್ಯವಿದ್ದ ಪೆನ್ ಡ್ರೈವ್​ಗಳನ್ನು ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಬಳಿಕ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ, ಕೆ.ಆರ್.ನಗರದ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದರು.

Share This Article