ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಕೋರ್ಟ್ನಲ್ಲೇ ಪ್ರಜ್ವಲ್ ರೇವಣ್ಣ (Prajwal Revanna) ಕಣ್ಣೀರಿಟ್ಟಿದ್ದಾರೆ.
ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆ ಪ್ರಮಾಣವನ್ನು ನಾಳೆಗೆ ಪ್ರಕಟಿಸಲಿದೆ. ಇದನ್ನೂ ಓದಿ: ಕೆಲಸದಾಕೆಯ ಮೇಲೆ ರೇಪ್ – ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಎಂದು ಕೋರ್ಟ್ ತೀರ್ಪು
ಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ, ಪ್ರಜ್ವಲ್ ರೇವಣ್ಣ, ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ್ದಾರೆ. ಬಳಿಕ ಕಣ್ಣೀರು ಒರೆಸಿಕೊಂಡು ಕೋರ್ಟ್ನಿಂದ ಹೊರಬಂದಿದ್ದಾರೆ.
ಪ್ರಕರಣ ಏನು?
ಶಾಸಕ ಹೆಚ್.ಡಿ.ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ 2019ರ ಜನವರಿ 1ರಿಂದ 2022ರ ಜ.1 ರ ಮಧ್ಯದ ಅವಧಿಯಲ್ಲಿ ಹಲವು ಬಾರಿ ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಮಗಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಕೇಸ್ – ಇಂದೇ ತೀರ್ಪು