ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಅವರಿಂದು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra), ವಿಪಕ್ಷ ನಾಯಕ ಆರ್.ಅಶೋಕ್ ಇತರ ನಾಯಕರನ್ನ ಭೇಟಿಯಾಗಿದ್ದಾರೆ. ವಿಜಯೇಂದ್ರ ಪಕ್ಕದಲ್ಲೇ ಕುಳಿತು ಕಾಫಿ ಕುಡಿದು, ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈಗಾಗಲೇ ರೆಬಲ್ ಟೀಂ ನಲ್ಲಿ ಗುರುತಿಸಿಕೊಂಡಿರುವ ಪ್ರತಾಪ್ ಸಿಂಹ ಅವರು ವಿಜಯೇಂದ್ರ ಅವರನ್ನ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
Advertisement
ಭೇಟಿಯಾಗಿದ್ದು ಏಕೆ?
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ (Mysuru Udayagiri Police Station) ಮೇಲೆ ಉದ್ರಿಕ್ತರಿಂದ ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ ಪ್ರತಿಭಟನೆ ನಡೆಸಲು ಅವಕಾಶ ಕೋರಿದ್ದರು. ʻಮೈಸೂರು ಚಲೋʼ ಹೋರಾಟ ನಡೆಸಲು ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ಖಾಸಗಿ ಹೋಟೆಲ್‌ನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದಾರೆ. ಕೆಲಕಾಲ ವಿಜಯೇಂದ್ರ ಪಕ್ಕದಲ್ಲೇ ಕುಳಿತು ಮಾತುಕತೆ ನಡೆಸಿದ್ದಾರೆ.
Advertisement
Advertisement
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ (FIR) ಸಂಬಂಧ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಬೊಜ್ಜು ವಿರುದ್ಧ ಅಭಿಯಾನ – ಒಮರ್ ಅಬ್ದುಲ್ಲಾ, ಆನಂದ್ ಮಹೀಂದ್ರಾ ಸೇರಿ 10 ಗಣ್ಯರ ನಾಮ ನಿರ್ದೇಶನ ಮಾಡಿದ ಮೋದಿ
Advertisement
ಪುಂಡ ಮುಸ್ಲಿಮರು (Muslims) ಸಾವಿರಾರು ಸಂಖ್ಯೆಯಲ್ಲಿ ಸೇರಿ ಪೊಲೀಸರ ಮೇಲೆ ಆಕ್ರಮಣ ಮಾಡಿದ್ರು. ಈ ಘಟನೆ ನಡೆದ ಬೆನ್ನಲ್ಲೇ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದೆವು. ಇದು ಪ್ರಚೋದನಕಾರಿಯಾ? ಸಿದ್ದರಾಮಯ್ಯ ಸರ್ಕಾರ ಬಂದ ನಂತರ ನನ್ನ ಮೇಲೆ ಹಲವು ಎಫ್‌ಐಆರ್ ಮಾಡಿದ್ದಾರೆ. ಈಗ ಉದಯಗಿರಿ ಠಾಣೆಯಲ್ಲಿ ಆಗಿದೆ. ಈ ರೀತಿ ಸಾಲು ಸಾಲು ಎಫ್‌ಐಆರ್ ಹಾಕಿ ಆತ್ಮಸ್ಥೈರ್ಯ ಕುಗ್ಗಿಸಬೇಕು, ಮನೆಯಿಂದ ಹೊರಬರಬಾರದು ಅನ್ನೋ ಉದ್ದೇಶದಿಂದ ಮಾಡ್ತಾ ಇದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಮಹಾ ಕುಂಭಮೇಳ: ತ್ರಿವೇಣಿಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಪುಣ್ಯಸ್ನಾನ