ವಾಲ್ಮೀಕಿ ಸಮುದಾಯದ ದಯಾನಂದ್‌ ಮೇಲೆ ಏಕೆ ಸಿಎಂಗೆ ಕೋಪ – ಪ್ರತಾಪ್‌ ಸಿಂಹ ಪ್ರಶ್ನೆ

Public TV
2 Min Read
Pratap Simha 2

– ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ ಅಂತ ಕಿಡಿ

ಮೈಸೂರು: ಇಷ್ಟು ದಿನ ಹಿಂದೂ ವಿರೋಧಿ ಆಗಿದ್ದ ಸಿದ್ದರಾಮಯ್ಯ (Siddaramaiah) ಈಗ ಪೊಲೀಸ್ ಇಲಾಖೆ ವಿರೋಧಿ ಆಗಿದ್ದಾರೆ. ಹಿಂದುಳಿದವರ ಉದ್ಧಾರಕ ಎಂದು ಹೇಳುವ ಸಿಎಂ ವಾಲ್ಮೀಕಿ ಸಮುದಾಯದ ನಿಷ್ಠಾವಂತ ಅಧಿಕಾರಿ ದಯಾನಂದ್ ರನ್ನ ಯಾಕೆ ಟಾರ್ಗೆಟ್ ಮಾಡಿದ್ದಾರೆ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಯಾನಂದ್ ಸಮರ್ಥ ನಿಷ್ಠಾವಂತ ಅಧಿಕಾರಿ. ನಾಯಕ ಸಮುದಾಯದ ವ್ಯಕ್ತಿ ಮೇಲೆ ಸಿಎಂಗೆ ಯಾಕೆ ಇಷ್ಟು ಕೋಪ. ಪೊಲೀಸ್ ಇಲಾಖೆ (Police Department) ಅನ್‌ಫಿಟ್‌ ಅಲ್ಲ. ಸರ್ಕಾರ ಅನ್ ಫಿಟ್ ಆಗಿದೆ ಎಂದು ರಾಜ್ಯ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಸಿದ್ದರಾಮಯ್ಯ

Chinnaswamy Stampede

ಘಟನೆ ನಡೆದು ಒಂದು ವಾರವಾದ್ರೂ ಸಿಎಂ ನೈತಿಕ ಹೊಣೆ ಹೊತ್ತಿಲ್ಲ. ಸಿಎಂ ನಾಲ್ಕು ಹನಿ ಕಣ್ಣೀರು ಹಾಕಿಲ್ಲ. ಅನುಕಂಪ, ಪಶ್ಚಾತ್ತಾಪದ ಮಾತು ಬಂದಿಲ್ಲ. ಕಾಲ್ತುಳಿತದ ವಿಚಾರ ಎರಡು ಗಂಟೆ ತಡವಾಗಿ ಸಿಎಂಗೆ ಗೊತ್ತಾಯಿತು ಎನ್ನುವುದಾದ್ರೆ ನೀವು ರಾಜ್ಯ ಹೇಗೆ ಸಂಭಾಳಿಸುತ್ತೀರಿ? ಎಂದು ಪ್ರಶ್ನಿಸಿದರಲ್ಲದೇ… ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ರನ್ನು ಯಾಕೆ ತೆಗೆದು ಹಾಕಿದ್ರಿ? ಮೊದಲು ಈ ರಹಸ್ಯ ಬಿಚ್ಚಿಡಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನೀವು ರಾಜ್ಯದ ಮುಖ್ಯಮಂತ್ರಿಗಳೋ or ವಿಧಾನಸೌಧ ಮೆಟ್ಟಿಲುಗಳ ಮುಖ್ಯಮಂತ್ರಿಗಳೋ: ಸಿದ್ದರಾಮಯ್ಯಗೆ ಹೆಚ್‌ಡಿಕೆ ಟಾಂಗ್‌

ಸಿಎಂ ತಮ್ಮ ಮೊಮ್ಮಗನಿಗೆ ಫೋಟೋಗ್ರಾಫ್, ಆಟೋಗ್ರಾಫ್ ಕೊಡಿಸಲು ಓಡುತ್ತಿದ್ದರೇನೋ… ಅದಕ್ಕೆ ಕಾಲ್ತುಳಿತ ವಿಚಾರ ಗೊತ್ತಾಗಿಲ್ಲ. ಸತ್ಯವತಿ ಅವರು ಯಾಕೆ ಒತ್ತಡ ಹೇರಿ ಕಾರ್ಯಕ್ರಮ ಮಾಡಿಸಿದರು? ಯಾಕೆ ಅವರನ್ನು ಇನ್ನೂ ನೀವು ಸಂಸ್ಪೆಡ್ ಮಾಡಿಲ್ಲ? ಯಾರನ್ನ ರಕ್ಷಣೆ ಮಾಡುತ್ತಿದ್ದಿರಿ? ಸತ್ಯವತಿ ಅವರು ಯಾಕೆ ಅಭಿಮಾನಿಗಳಿಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಅಂತಾ ಹೇಳಿದ್ರು? ಎಂದು‌ ಪ್ರಶ್ನೆಗಳ ಮಳೆ ಸುರಿಸಿದ್ದಾರೆ.

11 ಜನರ ಸಾವಿಗೆ ಕಣ್ಣೀರು ಹಾಕಿ ಅವರ ಕುಟುಂಬಕ್ಕೆ ಹೋಗಿ ಸಾಂತ್ವನ ಹೇಳಬೇಕಾದ ಸಿಎಂ ಮದ್ವೆ ಮುಂಜಿ ಅಂತಾ ಓಡಾಡುತ್ತಿದ್ದಾರೆ. ಸಿಎಂ ಅವರೇ ನಿಮಗೆ ಮದ್ವೆ ಊಟ, ಬೀಗರ ಊಟನೇ ಮುಖ್ಯನಾ? ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ತನಿಖಾ ಆಯೋಗದ ಮುಂದೆ ಮಾಹಿತಿ ಕೊಡ್ತೀವಿ – ಪರಮೇಶ್ವರ್

Share This Article