– ಮಾತೃ ಪಕ್ಷಕ್ಕೆ ಮರಳಿದ ಮಾಜಿ ಸಂಸದ
ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ (Muddahanume Gowda) ಅವರು ಬಿಜೆಪಿಯಿಂದ ಇಂದು ತಮ್ಮ ಮಾತೃಪಕ್ಷ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
Advertisement
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಮಾಜಿ ಸಂಸದರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಕಾಂಗ್ರೆಸ್ ಸೇರಿಕೊಂಡ ಬಳಿಕ ಮಾತನಾಡಿದ ಮುದ್ದಹನುಮೇಗೌಡ, ಪಕ್ಷಾಂತರವನ್ನ ಜನ ಒಪ್ಪಿಕೊಳ್ಳೋಕೆ ಶುರು ಮಾಡಿದ್ದಾರೆ. ಚುನಾವಣೆ ಸ್ಪರ್ಧೆ ಕಾರಣಕ್ಕೆ ಪಕ್ಷಾಂತರ ಮಾಡಿರೋದು ಬೇಸರವಾಗಿದೆ. ಜನತೆ ಮತ್ತು ನಾಯಕರಿಗೆ ನೋವು ಮಾಡಿದ್ದೇನೆ. ಹಾಗಾಗಿ ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ ಎಂದರು.
Advertisement
Advertisement
ಇನ್ನೂ ಹೆಚ್ಚು ದಿನ ನಮ್ಮ ರಾಜಕೀಯ ಜೀವನ ಇರಲ್ಲ. ಹಾಗಾಗಿ ನಮಗೆ ಅವಕಾಶ ಕೊಟ್ಟ ಮಾತೃಪಕ್ಷದ ಸೇವೆ ಮಾಡಲು ಮರಳಿ ಬಂದಿದ್ದೇನೆ. ಲೋಪದೋಶಗಳನ್ನ ಸರಿಪಡಿಕೊಂಡು ಹೋಗೋಣ. ನಾನು ಕಾಂಗ್ರೆಸ್ (Congress) ಪಕ್ಷಕ್ಕೆ ಋಣಿಯಾಗಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: Loksabha Election 2024: ದೆಹಲಿಯಲ್ಲಿ ಕೈಗೆ 3 ಸ್ಥಾನ ಬಿಟ್ಟು ಕೊಟ್ಟು 4 ಸ್ಥಾನಗಳಲ್ಲಿ AAP ಸ್ಪರ್ಧೆ?
Advertisement
ಕಾರ್ಯಕ್ರಮದಲ್ಲಿ ಸಚಿವರಾದ ರಾಜಣ್ಣ, ಡಾ. ಜಿ ಪರಮೇಶ್ವರ್, ಎಂಎಲ್‌ಸಿ ಸಲೀಂ ಅಹಮ್ಮದ್ ಭಾಗಿಯಾಗಿದ್ದರು. ಕಾಂಗ್ರೆಸ್ ಹಿರಿಯ ಶಾಸಕರಾದ ಟಿ.ಬಿ.ಜಯಚಂದ್ರ, ಕೆ.ಷಡಕ್ಷರಿ, ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದು, ಈ ಮೂಲಕ ಅಸಮಧಾನ ವ್ಯಕ್ತಪಡಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ.