ನವದೆಹಲಿ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ (Lal Bahadur Shastri) ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿಯವರು (Vibhakar Shastri) ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರ್ಪಡೆಯಾದರು.
ಪ್ರಧಾನಿ ನರೇಂದ್ರ ಮೋದಿಯವರ (Narendra Modi) ನೇತೃತ್ವದಲ್ಲಿ ಮಾಜಿ ಪ್ರಧಾನಿಯವರ ಕನಸಿನ ಜೈ ಜವಾನ್, ಜೈ ಕಿಸಾನ್ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ಬಿಜೆಪಿಯಲ್ಲಿ ನನ್ನ ಅಜ್ಜ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ದೃಷ್ಟಿಕೋನವನ್ನು ಮುಂದಕ್ಕೆ ಕೊಂಡೊಯ್ಯಲು ನನಗೆ ಅವಕಾಶ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ. ಪಕ್ಷದ ನಾಯಕರ ನಿರ್ದೇಶನದಂತೆ ನಾನು ಕೆಲಸ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ರೈತರೊಂದಿಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ: ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ
Advertisement
ಐ.ಎನ್.ಡಿ.ಐ.ಎ ಮೈತ್ರಿಕೂಟಕ್ಕೆ ಯಾವುದೇ ಸಿದ್ಧಾಂತವಿಲ್ಲ ಆದರೆ ಮೋದಿಜಿಯನ್ನು ಸೋಲಿಸುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಸಿದ್ಧಾಂತ ಏನೆಂಬುದನ್ನು ರಾಹುಲ್ ಗಾಂಧಿಯವರು ಹೇಳಬೇಕು ಎಂದು ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Advertisement
Advertisement
ನನಗಾಗಿ ಬಿಜೆಪಿಯ ಬಾಗಿಲು ತೆರೆದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ನಡ್ಡಾ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಮತ್ತು ಬ್ರಜೇಶ್ ಪಾಠಕ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ.
Advertisement
ಬಿಜೆಪಿ ಸೇರ್ಪಡೆಗೂ ಒಂದು ಗಂಟೆಗೂ ಮುನ್ನ ಎಕ್ಸ್‌ನಲ್ಲಿ ಕಾಂಗ್ರೆಸ್‍ಗೆ ರಾಜಿನಾಮೆ ಸಲ್ಲಿಸುವ ವಿಚಾರವನ್ನು ಅವರು ಹಂಚಿಕೊಂಡಿದ್ದರು. ಪೋಸ್ಟ್‌ನಲ್ಲಿ ಗೌರವಾನ್ವಿತ ಮಲ್ಲಿಕಾರ್ಜುನ ಖರ್ಗೆಯವರೇ ನಾನು ಕಾಂಗ್ರೆಸ್ ತೊರೆಯುತ್ತಿದ್ದೇನೆ ಎಂದು ಅವರು ಬರೆದುಕೊಂಡಿದ್ದರು. ಇದನ್ನೂ ಓದಿ: ಕಾಂಗ್ರೆಸ್‌ನವ್ರು ಕೊಟ್ಟ ಕಾರ್ಡ್ ನೀಡಿದ್ರೆ ಮೈತ್ರಿ ಪಕ್ಷದಿಂದ ಗಿಫ್ಟ್