ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ್ ದಾಸ್ ಅವರನ್ನು ನೇಮಕ ಮಾಡಲಾಗಿದೆ ಸರ್ಕಾರದ ಅಧಿಸೂಚನೆ ತಿಳಿಸಿದೆ.
ದಾಸ್ ಅವರ ನೇಮಕಾತಿ ಪ್ರಧಾನ ಮಂತ್ರಿಯ ಅವಧಿಯವರೆಗೆ ಅಥವಾ ಮುಂದಿನ ಆದೇಶದ ವರೆಗೆ ಇರಲಿದೆ ಎಂದು ಕ್ಯಾಬಿನೆಟ್‌ನ ನೇಮಕಾತಿ ಸಮಿತಿ ಹೇಳಿದೆ.
Advertisement
Advertisement
ಸರ್ಕಾರದ ಥಿಂಕ್ ಟ್ಯಾಂಕ್ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಅವರ ಅವಧಿಯನ್ನು ಸಹ ವಿಸ್ತರಿಸಲಾಗಿದೆ. 1987-ಬ್ಯಾಚ್‌ನ ನಿವೃತ್ತ ಐಎಎಸ್ ಅಧಿಕಾರಿಯನ್ನು 2023ರ ಫೆಬ್ರವರಿಯಲ್ಲಿ ಎರಡು ವರ್ಷಗಳ ಕಾಲ ನೀತಿ ಆಯೋಗ ಸಿಇಒ ಆಗಿ ನೇಮಿಸಲಾಗಿತ್ತು.
Advertisement
ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಆರ್‌ಬಿಐ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರು ಭಾರತದ ಆರ್ಥಿಕ ಸ್ಥಿರತೆಯನ್ನು ಬಲಪಡಿಸಲು ಹಲವಾರು ಕ್ರಮಗಳ ಮುಂಚೂಣಿಯಲ್ಲಿದ್ದರು.
Advertisement
ಆರ್ಥಿಕತೆಯ ಮೇಲೆ ಸಾಂಕ್ರಾಮಿಕ ರೋಗದ ಪ್ರತಿಕೂಲ ಪರಿಣಾಮ ಹೆಚ್ಚು ಬೀಳದಂತೆ ನೋಡಿಕೊಳ್ಳುವಲ್ಲಿ ಸಫಲರಾಗಿದ್ದರು. ಹಣಕಾಸು ನೀತಿ, ನಿಯಂತ್ರಕ ನೀತಿ ಸೇರಿದಂತೆ ಹಲವಾರು ಕ್ರಮಗಳ ಮೂಲಕ ಆರ್‌ಬಿಐ ಅನ್ನು ಮುನ್ನಡೆಸಿದ್ದರು.