ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ಅವರ ಪತ್ನಿ ನಿಧನರಾಗಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಾಲಿ ಶಾಸಕ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಮೃತಪಟ್ಟಿದ್ದಾರೆ.
ವಿಜಯಮ್ಮ (Vijayamma) ಅವರು ಕಳೆದ 2 ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತಿ, ಓರ್ವ ಮಗಳು, ಮಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಇದನ್ನೂ ಓದಿ: ಗುಂಡಿಟ್ಟು ಕೊಲ್ತೀನಿ, ಕಸ ಗುಡಿಸ್ತೀನಿ ಎಂದವನು ಎಲ್ಲಿ ಹೋದ?- ಅಶ್ವಥ್ ವಿರುದ್ಧ ಡಿಕೆಶಿ ವಾಗ್ದಾಳಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k