– ನಟಿ ರಚನಾ ಬ್ಯಾನರ್ಜಿ ಸೇರಿ ಹಲವು ಹೊಸ ಮುಖಗಳಿಗೆ ಮಣೆ
ಕೋಲ್ಕತ್ತಾ: ಮುಂಬರುವ 2024ರ ಲೋಕಸಭಾ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸುತ್ತಿರುವ ತೃಣಮೂಲ ಕಾಂಗ್ರೆಸ್ (TMC) 42 ಅಭ್ಯರ್ಥಿಗಳ (Lok Sabha candidates) ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿದ್ದಾರೆ.
ಸದ್ಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಅವರು 5 ಬಾರಿ ಪ್ರತಿನಿಧಿಸಿದ್ದ ಬರ್ಹಾಂಪುರ ಕ್ಷೇತ್ರದಿಂದ ಯೂಸುಫ್ ಪಠಾಣ್ (Yusuf Pathan) ಸ್ಪರ್ಧಿಸಲಿದ್ದಾರೆ. ಆದ್ರೆ ಈ ಕ್ಷೇತ್ರಕ್ಕೆ ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಯನ್ನ ಘೋಷಿಸಿಲ್ಲ. ಮೂಲಗಳ ಪ್ರಕಾರ ಅಧೀರ್ ರಂಜನ್ ಅವರೇ ಮತ್ತೆ ಸ್ಪರ್ಧಿಸಬಹುದು ಎನ್ನಲಾಗಿದೆ.
Advertisement
Advertisement
ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಭಾನುವಾರ ನಡೆದ ಮೆಗಾ ರ‍್ಯಾಲಿಯಲ್ಲಿ ಟಿಎಂಸಿ ತನ್ನ ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ (Abhishek Banerjee) ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಗಾರಪ್ಪ ಫ್ಯಾಮಿಲಿ V/S ಯಡಿಯೂರಪ್ಪ ಫ್ಯಾಮಿಲಿ
Advertisement
8 ಹಾಲಿ ಸಂಸದರಿಗೆ ಕೊಕ್:
42 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿಎಂಸಿ, ಪ್ರಸಕ್ತ ಅಭ್ಯರ್ಥಿಗಳ ಪಟ್ಟಿಯಲ್ಲಿ 8 ಹಾಲಿ ಸಂಸದರನ್ನು ಕೈಬಿಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮಾಜಿ ಕ್ರಿಕೆಟಿಗ ಯುಸೂಫ್ ಪಠಾಣ್, ಬಾಲಿವುಡ್ ದಂತಕಥೆ ಶತ್ರುಗನ್ ಸಿನ್ಹಾ, ಹೂಗ್ಲಿಯ ಜನಪ್ರಿಯ ನಟಿ ರಚನಾ ಬ್ಯಾನರ್ಜಿ (Rachana Banerjee) ಅವರಂತಹ ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.
Advertisement
ಅಲ್ಲದೇ ಈ ಹಿಂದೆ ಲೋಕಸಭೆಯಿಂದ ಉಚ್ಛಾಟಿತರಾಗಿದ್ದ ಮಹುವಾ ಮೊಯಿತ್ರಾ ಅವರನ್ನು ಕೃಷ್ಣನಗರ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಟಿಎಂಸಿ ಏಕಾಂಗಿಯಾಗಿ ಕಣಕ್ಕಿಳಿಯಲು ಅಭ್ಯರ್ಥಿಗಳನ್ನ ಘೋಷಿಸಿದ್ದು, I.N.D.I.A ಒಕ್ಕೂಟದ ಕೆಲ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Congress 1st Lok Sabha List: ಮತ್ತೆ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗಿಳಿದ ರಾಗಾ!